Monday, May 6, 2024
ಹೆಚ್ಚಿನ ಸುದ್ದಿ

ಕೊರೋನಾ ತಡೆಗೆ ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ : ಈ ನಿಯಮಗಳನ್ನು ಪಾಲಿಸಲೇ ಬೇಕು- – ಕಹಳೆ ನ್ಯೂಸ್

ಬೆಂಗಳೂರು: ಇಂಗ್ಲೆಂಡ್​ನಲ್ಲಿ ಕೊರೋನಾ ವೈರಸ್‌ ರೂಪಾಂತರ ಗೊಂಡಿದ್ದು, ಈ ನಡುವೆ ಕರ್ನಾಟಕ ಸೇರಿದಂತೆ ದೇಶದ ನಾನಾ ಭಾಗಗಳಲ್ಲಿ ತೀವ್ರ ತೆರನಾದ ಕಟ್ಟೆಚ್ಚರವನ್ನು ವಹಿಸಲಾಗಿದ್ದು, ಈಗಾಗಲೇ ಇಂಗ್ಲೆಂಡ್‌ನಿಂದ ಕರ್ನಾಟಕಕ್ಕೆ ಬಂದಿರುವವರ ಬಗ್ಗೆ ಮಾಹಿತಿಯನ್ನು ಅಧಿಕಾರಿಗಳು ಕಲೆ ಹಾಕುತ್ತಿದ್ದು, ಅವರ ಪ್ರಯಾಣದ ಮಾಹಿತಿ ಹಾಗೂ ಅವರ ಗಂಟಲು ದ್ರವವನ್ನು ಪರೀಕ್ಷೆಗಾಗಿ ಲ್ಯಾಬ್‌ಗೆ ಕಳುಹಿಸಿಕೊಡಲಾಗಿದೆ.

ಜಾಹೀರಾತು
ಜಾಹೀರಾತು

ಈ ನಡುವೆ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಇನ್ನೂ ಹೆಚ್ಚಿನ ಮಟ್ಟದ ಮುಂಜಾಗ್ರತ ಕ್ರಮಕ್ಕೆ ಮುಂದಾಗಿದ್ದು, ಈ ನಡುವೆ ರಾಜ್ಯ ಆರೋಗ್ಯ ಇಲಾಖೆಯು ಮಾರುಕಟ್ಟೆ ಪ್ರದೇಶಗಳಿಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.ಮಳಿಗೆ ಪ್ರವೇಶ ದ್ವಾರದಲ್ಲಿ ಹ್ಯಾಂಡ್‌ ಸ್ಯಾನಿಟೈಜರ್‌ ಅಥವಾ ಸೋಪಿನಿಂದ ಕೈ ತೊಳೆಯಲು ಅವಕಾಶ ಕಲ್ಪಿಸಬೇಕು. ಹೆಚ್ಚಿನ ದಟ್ಟಣೆ ಗಮನಿಸಲು ಸಿಸಿ ಕ್ಯಾಮೆರಾ ವ್ಯವಸ್ಥೆಯಾಗಬೇಕು. ವಸ್ತುಗಳ ಖರೀದಿಗೆ ಆನ್‌ಲೈನ್‌ ಉತ್ತೇಜನ ನೀಡಬೇಕು. ದಟ್ಟಣೆ ಇಲ್ಲದ ಅವಧಿಯಲ್ಲಿ ಬರುವ ಗ್ರಾಹಕರಿಗೆ ಡಿಸ್ಕೌಂಟ್‌ ನೀಡಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಎಲ್ಲಾ ಮಾರುಕಟ್ಟೆಗಳಲ್ಲಿ 6 ಅಡಿ ದೈಹಿಕ ಅಂತರ ಕಡ್ಡಾಯವಾಗಿ ಪಾಲಿಸಬೇಕು. ಮಾಸ್ಕ್ ಹಾಗೂ ಗ್ಲೌಸ್​ ಕಡ್ಡಾಯವಾಗಿ ಬಳಸಬೇಕು. ಕೆಮ್ಮುವಾಗ, ಸೀನುವಾಗ ತೀವ್ರ ನಿಗಾವಹಿಸಬೇಕು ಎಂದು ಸರ್ಕಾರ ಹೇಳಿದೆ. ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದರ ಮೇಲೆ ನಿಷೇಧ ಹೇರಲಾಗಿದೆ. ಪ್ರತಿದಿನ ಎಲ್ಲಾ ಶಾಪ್​ಗಳ ಮುಂದೆ ಸ್ವಚ್ಛ ಮಾಡುವುದು ಕಡ್ಡಾಯವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು