Recent Posts

Saturday, April 25, 2026
ಬೆಂಗಳೂರು

‘ದೇಶದಲ್ಲಿ ನಡೆಯುತ್ತಿರುವುದು ರೈತ ಪರ ಮತ್ತು ವಿರೋಧಿಗಳ ನಡುವಿನ ಹೋರಾಟ’; ಮಾಜಿ ಸಿ.ಎಂ ಸಿದ್ದರಾಮಯ್ಯ-ಕಹಳೆ ನ್ಯೂಸ್

ಬೆಂಗಳೂರು : ಇಂದು ರಾಷ್ಟ್ರೀಯ ರೈತ ದಿನಾಚರಣೆಯಾಗಿದ್ದು ಹಲವು ನಾಯಕರು ರೈತರಿಗೆ ಶುಭಾಶಯ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ನಡುವೆ ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ 28 ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಲ್ಲಿದ್ದಾರೆ. ಕೇಂದ್ರ ಮತ್ತು ರೈತ ಮುಖಂಡರುಗಳ ನಡುವೆ ಹಲವು ಸುತ್ತಿನ ಮಾತುಕತೆ ನಡೆದಿದ್ದರೂ ಎಲ್ಲವೂ ವಿಫಲವಾಗಿದೆ. ಇನ್ನು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯನವರು ರೈತರಿಗೆ ರಾಷ್ಟ್ರೀಯ ರೈತ ದಿನಾಚರಣೆಯ ಶುಭಾಶಯ ತಿಳಿಸಿದ್ದು , ಹಾಗೆ ”ದೇಶದಲ್ಲಿ ನಡೆಯುತ್ತಿರುವುದು ರೈತ ಪರ ಮತ್ತು ರೈತ ವಿರೋಧಿಗಳ ನಡುವಿನ ಹೋರಾಟ, ನಮ್ಮ ಕಾಂಗ್ರೆಸ್‌ ಹಿಂದೆಯೂ ಇಂದು ಮತ್ತು ಮುಂದೆಯೂ ಸದಾ ರೈತರ ಪರ. ಅನ್ನ ತಿನ್ನುವ ನಾವೆಲ್ಲರೂ ಕೃಷಿ ವಿರೋಧಿ ಕಾನೂನುಗಳ ವಿರುದ್ಧದ ರೈತರ ಪ್ರತಿಭಟನೆಗೆ ನಮ್ಮ ದನಿ ಸೇರಿಸೋಣ” ಎಂದು ಟ್ವೀಟ್‌ ಮೂಲಕ ಕರೆ ನೀಡಿದ್ದಾರೆ. ಹಾಗೆಯೇ, ”ಅನ್ನದಾತರಿಗೆ ರಾಷ್ಟ್ರೀಯ ರೈತ ದಿನಾಚರಣೆಯ ಶುಭಾಶಯಗಳು” ಎಂದು ತಿಳಿಸಿದ್ದಾರೆ.