Recent Posts

Sunday, September 13, 2026
ಹೆಚ್ಚಿನ ಸುದ್ದಿ

ಟಿ.ವಿ ನೇರಪ್ರಸಾರದಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಂಡ ಅಮೇರಿಕಾದ ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿರುವ ಕಮಲಾ ಹ್ಯಾರಿಸ್ -ಕಹಳೆ ನ್ಯೂಸ್

ವಾಷಿಂಗ್ಟನ್ : ಟಿವಿ ನೇರಪ್ರಸಾರದಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಳ್ಳುವ ಮೂಲಕ ಆಫ್ರಿಕನ್-ಅಮೇರಿಕಾನ್ ಜನರಲ್ಲಿ ಲಸಿಕೆ ಅಭಿಯಾನದ ಬಗ್ಗೆ ಅಮೇರಿಕಾದ ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿರುವ ಕಮಲಾ ಹ್ಯಾರಿಸ್ ಅವರು ನಂಬಿಕೆ ಮೂಡಿಸುವ ಪ್ರಯತ್ನ ನಡೆಸಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ತಮ್ಮ ಮೊದಲ ಎರಡು ಡೋಸ್ ಲಸಿಕೆಯನ್ನು ವಾಂಷಿಗ್ಟಂನ್ ಡಿಸಿಯ ಆರೋಗ್ಯ ಕೇಂದ್ರದಲ್ಲಿ ಕಮಲಾ ಹ್ಯಾರಿಸ್ ಹಾಕಿಸಿಕೊಂಡಿದ್ದಾರೆ. ಅಲ್ಲದೇ ಈ ಕುರಿತು ಮಾತನಾಡಿದ ಅವರು, ಆಫ್ರಿಕನ್-ಅಮೇರಿಕನ್ ಸಮುದಾಯವು ಕೊರೊನಾದಿಂದ ಹೆಚ್ಚಿನ ಪ್ರಮಾಣದಲ್ಲಿ ಸಾವು ಮತ್ತು ಅನಾರೋಗ್ಯವನ್ನು ಕಂಡಿದ್ದು, ನಿಮ್ಮ ಸಮುದಾಯದಲ್ಲಿಯೇ ನೀವು ಲಸಿಕೆ ತೆಗೆದುಕೊಳ್ಳಬಹುದು, ನಿಮಗೆ ತಿಳಿದಿರುವ ಜನರಿಂದಲೇ ನೀವು ಲಸಿಕೆಯನ್ನು ಸ್ವೀಕರಿಸಬಹುದು ಎಂದರು.
ಇನ್ನು ಕಮಲಾ ಹ್ಯಾರಿಸ್ ಅವರು ಜನವರಿ 20ರಂದು ಅಧಿಕಾರ ಸ್ವೀಕರಿಸುವ ಮೂಲಕ ಅಮೇರಿಕಾದ ಮೊದಲ ಇಂಡೋ-ಅಮೆರಿಕನ್ ಉಪಾಧ್ಯಕ್ಷೆ ಎಂಬ ಖ್ಯಾತಿಗೆ ಪಾತ್ರರಾಗಲಿದ್ದಾರೆ.