Recent Posts

Thursday, June 18, 2026
ಹೆಚ್ಚಿನ ಸುದ್ದಿ

ಹಂಪನಾ ವಿರುದ್ಧ ರಾಜ್ಯ ಸರಕಾರದ ಕ್ರಮ, ಇದು ಕೀಚಕ ನಡೆಯ ಪ್ರತೀಕ ; ಡಿ.ಕೆ. ಶಿವಕುಮಾರ್ ಟೀಕೆ-ಕಹಳೆ ನ್ಯೂಸ್

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಜನಪರ ಧ್ವನಿಯೆತ್ತಿದ ಖ್ಯಾತ ಸಾಹಿತಿ, ಸಂಶೋಧಕ ಹಂ.ಪ.ನಾಗರಾಜಯ್ಯ ವಿರುದ್ಧ ಪೊಲೀಸ್ ಕ್ರಮ ಕೈಗೊಂಡ ರಾಜ್ಯ ಬಿಜೆಪಿ ಸರಕಾರದ ನಡೆಯನ್ನು ಖಂಡಿಸಿದ್ದು, “ಇದು ಕೀಚಕ ನಡೆಯ ಪ್ರತೀಕ” ಎಂದು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಅಲ್ಲದೇ ಕೇಂದ್ರ ಸರಕಾರವನ್ನು ಟೀಕಿಸಿದರು ಎಂಬ ಏಕೈಕ ಕಾರಣಕ್ಕಾಗಿ ಹಂಪನಾ ಅವರನ್ನು ಮಂಡ್ಯ ಪೊಲೀಸ್  ಠಾಣೆಗೆ ಕರೆಸಿ ವಿಚಾರಣೆ ನಡೆಸಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಮತ್ತು ಕೀಚಕ ನಡೆಯ ಪ್ರತೀಕ ಎಂದು ಶಿವಕುಮಾರ್ ತಮ್ಮ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅಲ್ಲದೇ ಹಂಪನಾ ಅವರು ಈ ನಾಡು ಕಂಡ ಶ್ರೇಷ್ಠ ಭಾಷಾ ವಿಜ್ಞಾನಿ, ಸಂಶೋಧಕ ಮತ್ತು ಎಲ್ಲಕ್ಕೂ ಮಿಗಿಲಾಗಿ ಚಿಂತಕ. ಅಂತಹವರ ಧ್ವನಿ ಅಡಗಿಸಲು ರಾಜ್ಯ ಸರಕಾರ ಮುಂದಾದದ್ದು ನಾಚಿಕೆಗೇಡಿನ ಸಂಗತಿ ಎಂದು ಕಿಡಿಕಾರಿದ್ದಾರೆ. ಹಾಗೆಯೇ “ತಮ್ಮ ವಿರುದ್ಧ ಧ್ವನಿ ಎತ್ತುವ ರಾಜಕೀಯ ವಿರೋಧಿಗಳ ವಿರುದ್ಧ ಹಗೆತನ ಸಾಧಿಸುವ ಕೇಂದ್ರ ಮತ್ತು ರಾಜ್ಯ ಸರಕಾರಗಳು ಇದೀಗ ಸಾಹಿತಿಗಳನ್ನೂ ಆ ಪಟ್ಟಿಗೆ ಸೇರಿಸಿಕೊಂಡಿರುವುದು ದುರಂತದ ಸಂಗತಿ. ಯಾವುದೇ ಸರಕಾರವಿರಲಿ, ಅದರ ಜನವಿರೋಧಿ ನಡೆಯನ್ನು ಟೀಕಿಸುವ, ತಿದ್ದುವ, ತೀಡುವ ಹಕ್ಕನ್ನು ಈ ದೇಶದ ಪ್ರಜಾತಂತ್ರ ವ್ಯವಸ್ಥೆ, ಸಂವಿಧಾನ ಕಲ್ಪಿಸಿದ್ದು, ಆದರೆ ಸರಕಾರಗಳು ತಮಗಿರುವ ಅಧಿಕಾರ ದುರ್ಬಳಕೆ ಮಾಡಿಕೊಂಡು, ಪೊಲೀಸ್ ಬಲದ ಮೂಲಕ ಸಾಹಿತಿಗಳು, ಬುದ್ಧಿಜೀವಿಗಳು, ಪ್ರಜ್ಞಾವಂತರ ಧ್ವನಿ ಅಡಗಿಸಲು ಹೊರಟಿರುವುದು ಖಂಡನೀಯ. ಸರಕಾರ ತನ್ನ ಈ ವಕ್ರ ನಡೆಯನ್ನು ತಿದ್ದಿಕೊಳ್ಳದಿದ್ದರೆ ಹೋರಾಟ ನಡೆಸಬೇಕಾಗುತ್ತದೆ” ಎಂದು ಡಿ.ಕೆ. ಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ.