Tuesday, April 28, 2026
ಬೆಂಗಳೂರು

ಎಐಎಂಡಿಎಂಕೆ ನಾಯಕಿ ವಿ.ಕೆ.ಶಶಿಕಲಾ ಅವರು ತಮಿಳುನಾಡಿಗೆ ಪ್ರಯಾಣಿಸುತ್ತಿದ್ದ ವೇಳೆ ಅವರ ಇಬ್ಬರು ಬೆಂಬಲಿಗರ ಕಾರು ಬೆಂಕಿಗಾಹುತಿ-ಕಹಳೆ ನ್ಯೂಸ್

ಬೆಂಗಳೂರು : ಇಂದು ಎಐಎಂಡಿಎಂಕೆ ನಾಯಕಿ ವಿ.ಕೆ.ಶಶಿಕಲಾ ಅವರು ತಮಿಳುನಾಡಿಗೆ ಪ್ರಯಾಣಿಸುತ್ತಿದ್ದ ವೇಳೆ ಬೆಂಬಲಿಗರ ಎರಡು ಕಾರುಗಳಿಗೆ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕೃಷ್ಣಗಿರಿಯ ಟೋಲ್‍ಗೇಟ್‍ನಲ್ಲಿ ಶಶಿಕಲಾ ಅವರನ್ನು ಅದ್ದೂರಿಯಾಗಿ ಸ್ವಾಗತಿಸುತ್ತಿದ್ದಂತ ವೇಳೆ ಪಟಾಕಿ ಸಿಡಿಸಲಾಗಿದೆ. ಈ ಸಂದರ್ಭದಲ್ಲಿ ಶಶಿಕಲಾ ಅವರ ಬೆಂಬಲಿಗರ ಎರಡು ಕಾರುಗಳಿಗೆ ಬೆಂಕಿ ತಗುಲಿದ ಕಾರಣ ಕಾರು ಬೆಂಕಿಗಾಹುತಿಯಾಗಿದೆ ಎಂದು ಮಾಹಿತಿ ತಿಳಿದುಬಂದಿದೆ. ಇನ್ನು ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯ ಮಾಡಿದೆ. ಘಟನೆಯಲ್ಲಿ ಯಾವುದೇ ಜೀವಹಾನಿಯಾಗಿಲ್ಲ ಎಂದು ವರದಿ ಹೇಳಿದೆ. ಈ ನಡುವೆ ಶಶಿಕಲಾ ಅವರು ಹೊಸೂರಿನಲ್ಲಿರುವ ಮಾರಿಯಮ್ಮ ದೇಗುಲಕ್ಕೆ ತೆರಳಿದ್ದು, ಪೂಜೆ ಸಲ್ಲಿಸಿರುವುದಾಗಿ ತಿಳಿದು ಬಂದಿದೆ.