Recent Posts

Saturday, April 25, 2026
ಬೆಳ್ತಂಗಡಿ

ಬೆಳ್ತಂಗಡಿ ಪಟ್ಟಣ ಪಂಚಾಯತ್‍ನ ಸ್ಥಾಯಿ ಸಮಿತಿ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ತುಳಸಿ ಕರುಣಾಕರ್-ಕಹಳೆ ನ್ಯೂಸ್

ಬೆಳ್ತಂಗಡಿ : ತುಳಸಿ ಕರುಣಾಕರ್ ಅವರು, ಬೆಳ್ತಂಗಡಿ ಪಟ್ಟಣ ಪಂಚಾಯತ್‍ನ ಸ್ಥಾಯಿ ಸಮಿತಿ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಇವರು ಮಾರ್ಚ್ 1 ರಂದು ನಡೆದ ನಗರ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಸ್ಥಾಯಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು. ಸ್ಥಾಯಿ ಸಮಿತಿ ನೂತನ ಅಧ್ಯಕ್ಷರಾಗಿ ಶ್ರೀಮತಿ ತುಳಸಿ ಕರುಣಾಕರ, ಸದಸ್ಯರುಗಳಾಗಿ ಶರತ್ ಕುಮಾರ್, ಗೌರಿ, ಅಂಬರೀಷ್, ಜಗದೀಶ್ ಡಿ, ಲೋಕೇಶ್ ನಾಯ್ಕ, ಮುಸ್ತರ್ ಜಾನ್ ಇವರುಗಳನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ರಜನಿ ಕುಡ್ವ, ಮುಖ್ಯಾಧಿಕಾರಿ ಸುಧಾಕರ್, ಉಪಾಧ್ಯಕ್ಷ ಜಯಾನಂದ ಗೌಡ ಹಾಗೂ ಇಂಜಿನಿಯರ್ ಮಹಾವೀರ ಅರಿಗ , ನ.ಪಂಚಾಯತ್ ಸದಸ್ಯರುಗಳಾದ ಶ್ರೀಮತಿ ರಾಜಶ್ರೀ ರಮಣ್, ಜನಾರ್ಧನ, ಮುಖ್ಯಾಧಿಕಾರಿ ಸುಧಾಕರ್ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು, ಈ ವೇಳೆಯಲ್ಲಿ ನೂತನವಾಗಿ ಆಯ್ಕೆಯಾದ ಸ್ಥಾಯಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರನ್ನು ಶಾಸಕ ಹರೀಶ್ ಪೂಂಜ ಅಭಿನಂದಿಸಿದರು.