Recent Posts

Sunday, April 26, 2026
ಬೆಳ್ತಂಗಡಿ

ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಎನ್. ಗಣೇಶ್ ಗೌಡ-ಕಹಳೆ ನ್ಯೂಸ್

ಬೆಳ್ತಂಗಡಿ : ನಾವೂರು ಗ್ರಾಮ ಪಂಚಾಯತ್ ಅಧ್ಯಕ್ಷ ಎನ್. ಗಣೇಶ್ ಗೌಡ ನಾವೂರು ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಬೆಳ್ತಂಗಡಿಯಲ್ಲಿ ನಡೆದ ಮಂಡಲ ಕಾರ್ಯಕಾರಿಣಿ ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿ ಕಣ್ಣೂರು, ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಶಾಸಕ ಹರೀಶ್ ಪೂಂಜರವರ ಸಮ್ಮುಖದಲ್ಲಿ ಇವರನ್ನು ನೂತನ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಯಿತು. ಈಗಾಗಲೇ ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ್ ರಾವ್ ಕೂಡಾ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಇದೀಗ ಎನ್. ಗಣೇಶ್ ಗೌಡರವರು ಕೂಡಾ ಪ್ರಧಾನ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ. ಇವರು ಪ್ರಸ್ತುತ ನಾವೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ, ನಾವೂರು ಗೋಪಾಲಕೃಷ್ಣ ದೇವಸ್ಥಾನ ಟ್ರಸ್ಟ್ ನ ಕಾರ್ಯದರ್ಶಿಯಾಗಿ, ಬಿಜೆಪಿ ಜಿಲ್ಲಾ ರೈತ ಮೋರ್ಚಾದ ಉಪಾಧ್ಯಕ್ಷರಾಗಿ, ನಾವೂರು ಗುರುಕೃಪಾ ಭಜನಾ ಮಂಡಳಿಯ ಕಾರ್ಯದರ್ಶಿಯಾಗಿ , ನಾವೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.