Sunday, June 14, 2026
ಹೆಚ್ಚಿನ ಸುದ್ದಿ

ಉಜಿರೆ ಎಸ್.ಡಿ.ಎಂ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ತುಂಬು ಗರ್ಭಿಣಿ ಶ್ರೇಯಾ ರೈ ನಿಧನ- ಕಹಳೆ ನ್ಯೂಸ್

ದುಬೈ : ಉಜಿರೆ ಎಸ್.ಡಿ.ಎಂ ಕಾಲೇಜಿನ ಹಿರಿಯ ವಿದ್ಯಾರ್ಥಿನಿ, ಮತ್ತು ತುಂಬು ಗರ್ಭಿಣಿ ಶ್ರೇಯಾ ರೈ (ಸೌಮ್ಯ ರೈ) ಯವರು ನ್ಯುಮೋನಿಯಾಕ್ಕೆ ತುತ್ತಾಗಿ ಚಿಕಿತ್ಸೆ ಫಲಕಾರಿಯಾಗದೆ ದುಬೈಯಲ್ಲಿ ಶುಕ್ರವಾರ ಬೆಳಿಗ್ಗೆ ಮೃತ ಪಟ್ಟಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಮೂಲತಃ ಚಿಕ್ಕಮಗಳೂರು ಕಳಸದವರಾಗಿರುವ ಶ್ರೇಯಾ, ತಮ್ಮ ಪದವಿ ಮತ್ತು ಸ್ನಾತಕೋತ್ತರ ಪದವಿ ಶಿಕ್ಷಣವನ್ನು ಉಜಿರೆಯ ಶ್ರೀ.ಧ.ಮಂ. ಕಾಲೇಜಿನಲ್ಲಿ ಪೂರೈಸಿದ್ದಾರೆ. ಪಡುಬಿದ್ರಿ ಮೂಲದ ಪವನ್ ಶೆಟ್ಟಿಯವರನ್ನು ಮದುವೆಯಾದ ಬಳಿಕ ಶ್ರೇಯಾ ಗಂಡನೊಂದಿಗೆ ದುಬೈನಲ್ಲಿ ವಾಸವಾಗಿದ್ದರು. 7 ತಿಂಗಳ ತುಂಬು ಗರ್ಭಿಣಿಯಾಗಿದ್ದ ಇವರು ನ್ಯುಮೋನಿಯಾಕ್ಕೆ ತುತ್ತಾಗಿ ದುಬೈಯ ಖ್ಯಾತ ಆಸ್ವತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದರು. ಆದರೇ ಇಂದು ಬೆಳಿಗ್ಗೆ ರೋಗ ಉಲ್ಬಣಿಸಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಕಾಲೇಜು ದಿನಗಳಲ್ಲಿ ಅತ್ಯಂತ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದ ಶ್ರೇಯಾ ರೈಯವರು ಸಾಂಸ್ಕøತಿಕ ಹಾಗೂ ಶೈಕ್ಷಣಿಕ ಚಟುವಟಿಕೆಯಲ್ಲಿ ಮುಂದಿದ್ದರು. ಅವರ ಅಕಾಲಿಕ ನಿಧನ ಅವರ ಕುಟುಂಬ ಸದಸ್ಯರು, ಬಂಧು ಮಿತ್ರರನ್ನು ಶೋಕದ ಕಡಲಲ್ಲಿ ಮುಳುಗಿಸಿದೆ.