
ಬೆಳ್ತಂಗಡಿ: ಪಡಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಚ್ಚಾಡಿ ಎಂಬಲ್ಲಿ ತ್ಯಾಜ್ಯ ಸಂಪನ್ಮೂಲ ನಿರ್ವಹಣಾ ಘಟಕದಲ್ಲಿ ತ್ಯಾಜ್ಯ ವಿಂಗಡಣೆಯ ಜಾಗೃತಿ ಮೂಡಿಸುವ ವಿಶೇಷ ಆಂದೋಲನದ ಸಮಾರೋಪ ಸಮಾರಂಭದಲ್ಲಿ ಬೆಳ್ತಂಗಡಿ ತಾಲೂಕು ಶಾಸಕರಾದ ಹರೀಶ್ ಪೂಂಜ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಶಾಸಕರು ಸ್ವಚ್ಛ ಸಂಕೀರ್ಣ ಘಟಕವನ್ನು ಲೋಕಾರ್ಪಣೆ ಮಾಡಿದ್ದಾರೆ. ಇದ್ರ ಜೊತೆಗೆ ಇಂದು ಕರ್ನಾಟಕ ಸಿರೋ ಮಲಬಾರ್ ಕಥೋಲಿಕ್ ಅಸೋಸಿಯೇಷನ್(ರಿ) ಬೆಳ್ತಂಗಡಿ ಧರ್ಮಪ್ರಾಂತ್ಯ ಇದರ ವಾರ್ಷಿಕ ಮಹಾಸಭೆ ಹಾಗೂ ದಕ್ಷಿಣ ಕನ್ನಡ, ಉಡುಪಿ, ಮತ್ತು ಕೊಡಗು ಜೆಲ್ಲೆಗಳಲ್ಲಿ ನೂತನವಾಗಿ ಆಯ್ಕೆಯಾದ ಗ್ರಾಮ ಪಂಚಾಯತ್ ಸದಸ್ಯರುಗಳಿಗೆ ಅಭಿನಂದನಾ ಕಾರ್ಯಕ್ರಮ ನಡೆದಿದೆ.















