Recent Posts

Saturday, May 9, 2026
ಬೆಂಗಳೂರು

ನನ್ನ ರಾಜಕೀಯ ಬೆಳವಣಿಗೆಯನ್ನು ಸಹಿಸದ ಕೆಲವು ದುಷ್ಟರ ಸಂಚಿಗೆ ನಾನು ಬಲಿಯಾದೆ; ರಮೇಶ್ ಜಾರಕಿಹೊಳಿ-ಕಹಳೆ ನ್ಯೂಸ್

ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ನನ್ನ ರಾಜಕೀಯ ಬೆಳವಣಿಗೆಯನ್ನು ಸಹಿಸದ ಕೆಲವು ದುಷ್ಟರ ಸಂಚಿಗೆ ನಾನು ಬಲಿಯಾದೆ ಎಂದು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೇ ಇದರ ಹಿಂದಿರುವ ವ್ಯಕ್ತಿಗಳನ್ನು ಹಾಗೂ ಪಿತೂರಿ ಹೂಡಿದವರನ್ನು ಸುಮ್ಮನೆ ಬಿಡುವುದಿಲ್ಲ. ಈ ಸಂಬಂಧ ಯಾವುದೇ ತನಿಖೆ ಎದುರಿಸಲು ಸಿದ್ದವಿರುವುದಾಗಿ ರಮೇಶ್ ಜಾರಕಿಹೊಳಿ ಹೇಳಿದರು. ಬೆಂಗಳೂರಿನ ಎರಡು ಕಡೆ ಷಡ್ಯಂತ್ರ ನಡೆದಿದೆ. ಸಿಡಿ ಬಿಡುಗಡೆಯಾಗುವ 26 ಗಂಟೆ ಮೊದಲೇ ನನಗೆ ಮಾಹಿತಿ ದೊರಕಿತ್ತು. ಯಶವಂತಪುರ ಹಾಗೂ ಹುಳಿಮಾವುನಲ್ಲಿ ಷಡ್ಯಂತ್ರ ನಡೆದಿದೆ ಎಂದು ರಮೇಶ್ ಜಾರಕಿಹೊಳಿ ಬಹಿರಂಗಪಡಿಸಿದರು. ರಮೇಶ್ ಜಾರಕಿಹೊಳಿ ಅವರು, ನಾನು ಅಪರಾಧಿಯಲ್ಲ. ಇದು ನಕಲಿ ಸಿಡಿ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.