Tuesday, March 10, 2026
ಉಡುಪಿ

ಅಡುಗೆ ಮಾಡುತ್ತಿದ್ದ ವೇಳೆ ಸೀರೆಗೆ ಬೆಂಕಿ ತಗುಲಿ 67 ವರ್ಷದ ಮಹಿಳೆ ಮೃತ್ಯು-ಕಹಳೆ ನ್ಯೂಸ್

ಉಡುಪಿ : ಬ್ರಹ್ಮಾವರದ ವರಂಬಳ್ಳಿ ಗ್ರಾಮದಲ್ಲಿ ಬುಧವಾರದಂದು 67 ವರ್ಷದ ಮಹಿಳೆ ಅಡುಗೆ ಮಾಡುವಾಗ ಆಕಸ್ಮಿಕವಾಗಿ ಸೀರೆಗೆ ಬೆಂಕಿ ತಗುಲಿ ಸುಟ್ಟು ಗಾಯಗೊಂಡು ಮೃತಪಟ್ಟಿರುವ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಬ್ರಹ್ಮಾವರದ ವರಂಬಳ್ಳಿ ಗ್ರಾಮದ ಉಪ್ಪಿನಕೋಟೆ ನಿವಾಸಿ 67ವರ್ಷದ ಮಿಲ್ಲಿ ಡಿಸಿಲ್ವಾ ಮೃತಪಟ್ಟ ಮಹಿಳೆಯಾಗಿದ್ದಾರೆ. ಅವರು ಮಾರ್ಚ್ 6 ರಂದು ಬೆಳಿಗ್ಗೆ 11.15ರ ಸುಮಾರಿಗೆ ಅಡುಗೆ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಏಕಾಏಕಿ ಅವರ ಸೀರೆಗೆ ಬೆಂಕಿ ತಗುಲಿದ್ದು, ಕ್ಷಣಾರ್ಧದಲ್ಲೇ ಬೆಂಕಿ ದೇಹವನ್ನು ಆವರಿಸಿದೆ. ತಕ್ಷಣ ಅವರನ್ನು ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ, ಮಾರ್ಚ್ 10 ರಂದು ಬೆಳಿಗ್ಗೆ 7.30 ಕ್ಕೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಜಾಹೀರಾತು
ಜಾಹೀರಾತು