Thursday, March 12, 2026
ಬೆಳ್ತಂಗಡಿ

ಇಂದು ಬೆಳಗ್ಗೆ ಮುಂಡಾಜೆ ಗ್ರಾಮದ ಕಾಯರ್ತೋಡಿ ರಸ್ತೆಯ ಸೀಟ್ ಬಳಿ 6 ಮಂಗಗಳ ಮೃತದೇಹ ಪತ್ತೆ ; ಸ್ಥಳೀಯರಲ್ಲಿ ಆತಂಕ-ಕಹಳೆ ನ್ಯೂಸ್

ಬೆಳ್ತಂಗಡಿ : ಇಂದು ಬೆಳಗ್ಗೆ ಮುಂಡಾಜೆ ಗ್ರಾಮದ ಕಾಯರ್ತೋಡಿ ರಸ್ತೆಯ ಸೀಟ್ ಬಳಿ ರಕ್ಷಿತಾರಣ್ಯ ಪ್ರದೇಶದಲ್ಲಿ ರಸ್ತೆಬದಿ 6 ಮಂಗಗಳ ಮೃತದೇಹ ಪತ್ತೆಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈಗಾಗಲೇ ಹಲವೆಡೆ ಮಂಗನ ಕಾಯಿಲೆಯ ಆತಂಕವಿರುವುದರಿಂದ ಸ್ಥಳೀಯರು ಆತಂಕಗೊಂಡಿದ್ದಾರೆ. ಒಂದು ಮರಿ ಮಂಗ ಸಹಿತ 6 ಮಂಗಗಳ ಮೃತ ದೇಹ ರಸ್ತೆ ಬದಿ ಪತ್ತೆಯಾಗಿರುವುದನ್ನು ದಾರಿಹೋಕರು ನೋಡಿದ್ದು, ಕೂಡಲೇ ಅರಣ್ಯ ಇಲಾಖೆ ಆರೋಗ್ಯ ಇಲಾಖೆ ಮತ್ತು ಪಂಚಾಯಿತಿಗೆ ಸ್ಥಳೀಯರು ಮಾಹಿತಿ ನೀಡಿದ್ದು, ಸುತ್ತಮುತ್ತ ಆತಂಕ ಸೃಷ್ಟಿಯಾಗಿದೆ ಕೆಲವು ದಿನ ಹಿಂದೆಯಷ್ಟೇ ಬೆಳಾಲು ರಸ್ತೆ ಸಮೀಪ ಎರಡು ಮಂಗಗಳ ಮೃತದೇಹ ಸಿಕ್ಕಿದ್ದು, ಅದರ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿತ್ತು. ಮಂಗಗಳ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ರಸ್ತೆಯ ಬದಿಯಲ್ಲಿ ಬಿದ್ದಿರಬಹುದಾದ ವಿಷ ಪದಾರ್ಥ ಸೇವಿಸಿವೆಯಾ, ಅಥವಾ ಕೃಷಿಗೆ ಉಪಟಳವಾಗಿ ಕೊಂದು ಎಸೆದಿರಬಹುದೇ ಅಥವಾ ಇನ್ಯಾವುದಾದರೂ ಕಾರಣ ಇರಬಹುದೇ ಎಂಬುದು ಆರೋಗ್ಯ ಇಲಾಖೆ ಪರಿಶೀಲನೆಯಿಂದಷ್ಟೆ ತಿಳಿದುಬರಬೇಕಿದೆ.

ಜಾಹೀರಾತು
ಜಾಹೀರಾತು