Tuesday, March 10, 2026
ಹೆಚ್ಚಿನ ಸುದ್ದಿ

ಜಲಮೂಲಗಳನ್ನು ಸಂರಕ್ಷಿಸದಿದ್ದರೆ ಭವಿಷ್ಯದಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ; ನ್ಯಾಯಾದೀಶ ಎಸ್. ಎಂ.ಅರುಟಗಿ ಆತಂಕ –ಕಹಳೆ ನ್ಯೂಸ್

ಬಾಗೇಪಲ್ಲಿ : ನೀರು ಸಕಲ ಜೀವರಾಶಿಗಳಿಗೂ ಜೀವಜಲ. ಹಾಗೂ ಅಮೃತ ಇದು ಮುಗಿದು ಹೋಗುವ ಸಂಪನ್ಮೂಲವಾದ ನೀರನ್ನು ಮಿತವಾಗಿ ಬಳಸದಿದ್ದರೆ ಮುಂದೆ ಕಷ್ಟದ ದಿನಗಳನ್ನು ಎದುರಿಸಬೇಕಾಗುತ್ತದೆ’ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಅವರು ಬಾಗೇಪಲ್ಲಿ ಕಾನೂನು ಸೇವಾ ಸಮಿತಿ, ತಾಲೂಕು ವಕೀಲರ ಸಂಘ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಹಾಗೂ ಕರ್ನಾಟಕ ಜರ್ನಲಿಸ್ಟ ಯೂನಿಯನ್ ವತಿಯಿಂದ ಸೋಮವಾರ ನ್ಯಾಯಾಲಯ ಆವರಣದಲ್ಲಿ ಏರ್ಪಡಿಸಿದ್ದ ವಿಶ್ವ ಜಲ ದಿನಾಚರಣೆಯನ್ನು ಉದ್ಘಾಟನೆ ಮಾಡಿ ಮಾತನಾಡಿದರು. ನೀರಿದ್ದರೆ ಮಾತ್ರವೇ ನಮ್ಮೆಲ್ಲರ ಉಳಿವು. ನೀರಿಲ್ಲವಾದರೆ ನಮ್ಮೆಲ್ಲರ ಶಾಶ್ವತ ಅಳಿವು ಶತಸಿದ್ಧ ಎಂಬುದನ್ನು ಎಲ್ಲರೂ ನೆನಪಿಡಿ. ಅಮೃತ ಸಮಾನವಾದ ನೀರನ್ನು ನಾವು ಮಾತ್ರವಲ್ಲದೆ, ನಮ್ಮ ಮುಂದಿನ ಜನಾಂಗಕ್ಕೂ ಕೂಡ ನೀರನ್ನು ಉಳಿಸೋಣ ಎಂದು ಹೇಳಿದರು.

ವಕೀಲರು ಹಾಗೂ ಸಂಪನ್ಮೂಲ ವ್ಯಕ್ತಿಗಳಾದ ಚಾಂದ್ ಭಾಷಾ ಮಾತನಾಡಿ, ಮನುಷ್ಯನ ದೇಹ ಪಂಚಭೂತಗಳಿಂದ ಸೃಷ್ಟಿಯಾಗಿದೆ. ನಮ್ಮ ಸುತ್ತಲೂ ಸಾಕಷ್ಟು ನೀರಿದೆ. ಆದರೆ, ಅದು ಸಮರ್ಪಕವಾಗಿ ಬಳಕೆಯಾಗುತ್ತಿಲ್ಲ. ಮನುಷ್ಯ ಮನಬಂದಂತೆ ಅವೈಜ್ಞಾನಿಕವಾಗಿ ನೀರು ಬಳಕೆ ಮಾಡುತ್ತಿದ್ದಾನೆ. ನೀರನ್ನು ಸಂರಕ್ಷಿಸದಿದ್ದರೆ ಮನುಕುಲದ ಭವಿಷ್ಯ ಕರಾಳವಾಗುತ್ತದೆ’ ಎಂದು ತಿಳಿಸಿದರು. ತಾಲೂಕಿನಲ್ಲಿ ನೀರಿನ ಸಮಸ್ಯೆ ಗಂಭೀರವಾಗಿದೆ. ಮಳೆ ಕೊರತೆಯಿಂದ ಪ್ರತಿ ವರ್ಷ ಅಂತರ್ಜಲ ಮಟ್ಟ ಕುಸಿಯುತ್ತಿದೆ. ಜಿಲ್ಲೆಯ ಜನರಲ್ಲಿ ಮಳೆ ನೀರಿನ ಸದ್ಭಳಕೆ ಬಗ್ಗೆ ಅರಿವು ಮೂಡಿಸಬೇಕು. ಚಿಕ್ಕಬಳ್ಳಾಪುರ ಮತ್ತು ಕೋಲಾರ ಅವಳಿ ಜಿಲ್ಲೆಗಳಲಾದ ಬಯಲು ಸೀಮೆ ಪ್ರದೇಶದಲ್ಲಿ ಮಳೆ ನೀರಿನ ಸದ್ಭಳಕೆ ಅತ್ಯವಶ್ಯಕ’ ಎಂದು ಕಿವಿಮಾತು ಹೇಳಿದರು.

ವಕೀಲರಾದ ಹಾಗೂ ಸಂಪನ್ಮೂಲ ವ್ಯಕ್ತಿಗಳಾದ ಎ.ಮಂಜುನಾಥ ಮಾತನಾಡಿ, ಜಾಗತಿಕ ತಾಪಮಾನ, ಪರಿಸರ ಮಾಲಿನ್ಯ, ಕೈಗಾರಿಕರಣ, ಅರಣ್ಯನಾಶ ಇನ್ನಿತರ ಕಾರಣಗಳಿಂದ ಅಂತರ್ಜಲ ಮಟ್ಟ ದಿನೇ ದಿನೇ ಕುಸಿಯುತ್ತಿದೆ. ಬೇಸಿಗೆ ಶುರುವಾಗುವ ಮುಂಚೆಯೇ ನೀರಿನ ಕೊರತೆ ಕಂಡುಬರುತ್ತಿದೆ. ನಮ್ಮ ಭಾರತದಲ್ಲಿ ಎಷ್ಟೋ ಗ್ರಾಮಗಳಲ್ಲಿ ಇಂದಿಗೂ ನೀರಿನ ಕೊರತೆಯ ತೀವ್ರ ಸಮಸ್ಯೆ ಇದೆ. ನೀರನ್ನು ಅನವಶ್ಯಕವಾಗಿ ಪೋಲುಮಾಡದೆ ಹನಿ ಹನಿ ನೀರನ್ನು ಸಂರಕ್ಷಿಸುವುದು, ಮುಂದಿನ ಪೀಳಿಗೆಗೆ ಉಳಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಈ ಸಂದರ್ಭದಲ್ಲಿ ಹಿರಿಯ ವಕೀಲರಾದ ಸಿ.ಎನ್.ಚಿನ್ನಸ್ವಾಮಿ, ಪಿ.ವಿ.ಅಪ್ಪಾಸ್ವಾಮಿ ಹಾಗೂ ನಾಗಭೂಷಣ. ಎನ್. ಇನ್ನೂ ಮುಂತಾದವರು ಪ್ರಮುಖರು ಪಾಲ್ಗೊಂಡಿದ್ದರು