Recent Posts

Saturday, May 9, 2026
ದಕ್ಷಿಣ ಕನ್ನಡಸುದ್ದಿ

Breaking News : ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿಯಲ್ಲಿ ಬಸ್ಸು ಕಂಟೈನರ್ ಲಾರಿ ನಡುವೆ ಮುಖಮುಖಿ ಡಿಕ್ಕಿ ; ಬೆಂಕಿಯ ಕೆನ್ನಾಲಿಗೆಗೆ ವಾಹನಗಳೆರಡು ಸುಟ್ಟು ಭಸ್ಮ, ಲಾರಿ ಚಾಲಕ ಸಜೀವ ದಹನ – ಕಹಳೆ ನ್ಯೂಸ್

ಉಪ್ಪಿನಂಗಡಿ : ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿಯಲ್ಲಿ ಕಂಟೈನರ್ ಲಾರಿ ಹಾಗೂ ಖಾಸಗಿ ಬಸ್ಸು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳು ಬೆಂಕಿಗಾಹುತಿಯಾಗಿ ಲಾರಿ ಚಾಲಕ ಸಜೀವ ದಹನಗೊಂಡ ಘಟನೆ ಬುಧವಾರ ತಡರಾತ್ರಿ ಸಂಭವಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಬೆಂಗಳೂರು ಕಡೆಗೆ ಚಲಿಸುತ್ತಿದ್ದ ಖಾಸಗಿ ಬಸ್ಸು ಹಾಗೂ ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಂಟೈನರ್ ಲಾರಿ ನೆಲ್ಯಾಡಿಯಲ್ಲಿ ಮುಖಾಮುಖಿ ಡಿಕ್ಕಿ ಹೊಡೆದು ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಬಸ್ಸಿನಲ್ಲಿದ್ದ ಪ್ರಯಾಣಿಕರು ಕೆಳಗಿಳಿದು ಅಪಾಯದಿಂದ ಪಾರಾಗಿದ್ದಾರೆ. ಬೆಂಕಿಯ ತೀವ್ರತೆ ಹೆಚ್ಚಾಗಿ ಎರಡೂ ವಾಹನಗಳು ಸುಟ್ಟು ಭಸ್ಮವಾಗಿದ್ದು, ಲಾರಿ ಚಾಲಕ ಲಾರಿ ಯೊಳಗೆಸಿಲುಕಿ ಹೊರಬರಲಾಗದೆ ಸಜೀವ ದಹನವಾಗಿದ್ದಾನೆ.

ಅಗ್ನಿಶಾಮಕ ದಳ ಹಾಗೂ ಪೊಲೀಸರು ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯಮಾಡಿದ್ದಾರೆ. ಬೆಂಗಳೂರು ಮಂಗಳೂರು ವಾಹನ ಸಂಚಾರ ರಾತ್ರಿ ಸುಮಾರು 12. 00 ಗಂಟೆಯಿಂದ ಬಂದ್ ಆಗಿದೆ.