Wednesday, March 11, 2026
ಹೆಚ್ಚಿನ ಸುದ್ದಿ

ಹ್ಯಾಂಡ್ ಬ್ರೇಕ್ ಜಾಮ್ ಆಗಿ ಕಾರು-ಆಟೋ ನಡುವೆ ಭೀಕರ ಅಪಘಾತ ; ಸ್ಥಳದಲ್ಲೇ ಮೃತಪಟ್ಟ ಆಟೋ ಚಾಲಕ-ಕಹಳೆ ನ್ಯೂಸ್

ಉಪ್ಪಿನಂಗಡಿ : ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕೊಡಾಜೆ ಎಂಬಲ್ಲಿ ಇಂದು ಬೆಳಗ್ಗೆ ಹ್ಯಾಂಡ್ ಬ್ರೇಕ್ ಜಾಮ್ ಆದ ಕಾರಣ ಆಟೋವೊಂದು ಎದುರಿನಿಂದ ಬರುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಮೃತಪಟ್ಟ ಚಾಲಕನನ್ನು ಕೊಡಾಜೆ ಪಂತಡ್ಕ ನಿವಾಸಿ 35 ವರ್ಷದ ಹಮೀದ್ ಎಂದು ಗುರುತಿಸಲಾಗಿದೆ. ಹಾಗೆಯೇ ಈ ಘಟನೆಯಲ್ಲಿ ರಿಕ್ಷಾದಲ್ಲಿದ್ದ ಹಮೀದ್ ಅವರ ಪತ್ನಿ ಗಂಭೀರ ಗಾಯಗೊಂಡಿದ್ದು, ಇವರನ್ನು ಮಂಗಳೂರಿನ ಆಸ್ವತ್ರೆಗೆ ದಾಖಲಿಸಲಾಗಿದೆ. ಈ ಘಟನೆಯು ಮಾಣಿಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಆಟೋ ರಿಕ್ಷಾದ ಹ್ಯಾಂಡ್ ಬ್ರೇಕ್ ಇದ್ದಕ್ಕಿದ್ದಂತೆ ಜಾಮ್ ಆಗಿದ್ದು, ಈ ವೇಳೆಯಲ್ಲಿ ವಿರುದ್ಧ ದಿಕ್ಕಿನಿಂದ ಆಗಮಿಸುತ್ತಿದ್ದ ಫೋರ್ಡ್ ಇಕೋಸ್ಪೋಟ್ರ್ಸ್ ಕಾರಿಗೆ ಅಪ್ಪಳಿಸಿದೆ. ಢಿಕ್ಕಿಯ ರಭಸಕ್ಕೆ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.