Friday, September 11, 2026
ಬೆಳ್ತಂಗಡಿ

ಪಡಂಗಡಿ ಗ್ರಾಮ ಪಂಚಾಯತ್ ಬಳಿಯ ರಸ್ತೆಯಲ್ಲಿ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ; ಬೈಕ್ ಸವಾರ ಸ್ಥಳದಲ್ಲೇ ಮೃತ್ಯು-ಕಹಳೆ ನ್ಯೂಸ್

ಬೆಳ್ತಂಗಡಿ : ಪಡಂಗಡಿ ಗ್ರಾಮ ಪಂಚಾಯತ್ ಬಳಿಯ ರಸ್ತೆಯಲ್ಲಿ ಶನಿವಾರ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ, ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಮೃತಪಟ್ಟ ಮ್ಯಕ್ತಿಯನ್ನು ಪೊಯ್ಯೆಗುಡ್ಡೆ ನಿವಾಸಿ ಬೈಕ್ ಸವಾರ 34ವರ್ಷದ ಜಾಬಿರ್ ಎಂದು ಗುರುತಿಸಲಾಗಿದೆ. ಧರ್ಮಸ್ಥಳದಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಸರಕಾರಿ ಬಸ್ಸು ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿದ್ದು, ಪರಿಣಾಮ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇನ್ನು ಜಾಬಿರ್ ಅವರು ಕಳೆದ 15 ದಿನಗಳ ಹಿಂದೆಯಷ್ಟೇ ವಿದೇಶದಿಂದ ಊರಿಗೆ ಬಂದಿದ್ದರು ಎನ್ನಲಾಗಿದ್ದು, ಈ ಕುರಿತು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.