Recent Posts

Friday, June 19, 2026
ಬೆಳ್ತಂಗಡಿ

ಮೈಸೂರಿನಿಂದ ಧರ್ಮಸ್ಥಳಕ್ಕೆ ವಿವಾಹಕ್ಕೆಂದು ಹೋಗುತ್ತಿದ್ದ ಬಸ್ಸು ಪಲ್ಟಿ ; 15 ಕ್ಕೂ ಅಧಿಕ ಮಂದಿ ಗಾಯ-ಕಹಳೆ ನ್ಯೂಸ್

ಬೆಳ್ತಂಗಡಿ : ನಿಡ್ಲೆ ಗ್ರಾಮದ ಬೂಡುಜಾಲು ಶಾಂತಿನಗರ ಸಮೀಪ ಶನಿವಾರ ರಾತ್ರಿ ಮೈಸೂರಿನಿಂದ ಧರ್ಮಸ್ಥಳಕ್ಕೆ ವಿವಾಹಕ್ಕೆಂದು ಹೋಗುತ್ತಿದ್ದ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದು 15 ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಘಟನೆಯಲ್ಲಿ 3 ಮಕ್ಕಳ ಸಹಿತ ಓರ್ವನಿಗೆ ಗಂಭೀರ ಗಾಯವಾಗಿದ್ದು, ಬಸ್ಸಿನಲ್ಲಿ 30 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಈ ಘಟನೆ ನಡೆದ ಕೂಡಲೇ ಸ್ಥಳೀಯರು ರಕ್ಷಣೆ ಕಾರ್ಯ ನಡೆಸಿದ್ದು, ಗಾಯಾಳುಗಳನ್ನು ಉಜಿರೆ ಬೆಳ್ತಂಗಡಿಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.