Friday, April 24, 2026
ಕ್ರೈಮ್ದಕ್ಷಿಣ ಕನ್ನಡ

ಮಂಗಳೂರು: ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ನಡುವೆ ಮಾರಾಮಾರಿ – ಇಬ್ಬರಿಗೆ ಗಾಯ- ಕಹಳೆ ನ್ಯೂಸ್

ಮಂಗಳೂರು : ಜಿಲ್ಲಾ ಕಾರಾಗೃಹದಲ್ಲಿ ಇಂದು ಬೆಳಿಗ್ಗೆ ಎರಡು ಖೈದಿಗಳ ತಂಡದ ನಡುವೆ ಮಾರಾಮಾರಿ ಉಂಟಾಗಿದ್ದು, ಖೈದಿಗಳ ನಡುವಿನ ಹೊಡೆದಾಟದಲ್ಲಿ ಇಬ್ಬರು ಖೈದಿಗಳು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.

ಮಂಗಳೂರಿನ ಪಣಂಬೂರು ಠಾಣೆಯಲ್ಲಿ ದರೋಡೆ ಪ್ರಕರಣದಲ್ಲಿ ಬಂಧಿತನಾಗಿ, ಜೈಲು ಸೇರಿದ್ದಂತ ಸಮೀರ್ ಹಾಗೂ ಅನ್ಸಾರ್, ಜೈನುದ್ದೀನ್ ನಡುವೆ ಜಗಳ ಉಂಟಾಗಿದೆ. ಜಗಳ ತಾರಕಕ್ಕೆ ಹೋಗಿ, ಮಾರಾಮಾರಿ ಕೂಡ ನಡೆದಿದೆ. ಇದರಿಂದಾಗಿ ಅನ್ಸಾರ್, ಜೈನುದ್ದೀನ್ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಅಂದಹಾಗೇ ಬೆಳಿಗ್ಗೆ ತಿಂಡಿ ಸಮಯದಲ್ಲಿ ಈ ಜಗಳ ನಡೆದಿದೆ ಎನ್ನಲಾಗಿದೆ. ಕೈಗೆ ಸಿಕ್ಕಂತ ವಸ್ತುಗಳಿಂದ ಪರಸ್ಪರ ಹೊಡೆದಾಡಿಕೊಂಡಿದ್ದರಿಂದಾಗಿ ಅನ್ಸಾರ್, ಜೈನುದ್ದೀನ್ ಅವರ ಭುಜ, ಬೆನ್ನಿಗೆ ಗಾಯವಾಗಿದೆ. ಗಾಯಾಳುಗಳನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಮಂಗಳೂರು ಕಮೀಷನರ್ ಶಶಿಕುಮಾರ್ ಜೈಲಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.