Recent Posts

Sunday, April 26, 2026
ಸುದ್ದಿ

ಮಂಗಳೂರು: ಬ್ಯಾಟರಿ ಅಂಗಡಿ ಬೆಂಕಿಗಾಹುತಿ – ಲಕ್ಷಾಂತರ ರೂಪಾಯಿ ನಷ್ಟ- ಕಹಳೆ ನ್ಯೂಸ್

ತೊಕ್ಕೊಟ್ಟು ಬ್ಯಾಟರಿ ಅಂಗಡಿಯೊಂದು ಬೆಂಕಿಗೆ ಆಹುತಿಯಾಗಿರುವ ಘಟನೆ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ಸಂಭವಿಸಿದೆ.

ಓವರ್ ಬ್ರಿಡ್ಜ್ ಬಳಿಯಿರುವ ಗೋಲ್ಡನ್ ಸ್ಪೇರ್ ಪಾರ್ಟ್ಸ್ ಅಂಗಡಿಯಲ್ಲಿ ಅವಘಢ ಸಂಭವಿಸಿದ್ದು, ಮುಚ್ಚಿದ್ದ ಅಂಗಡಿಯಲ್ಲಿ ದಟ್ಟವಾಗಿ ಹೊಗೆ ಆವರಿಸಿರುವುದನ್ನು ಕಂಡ ಸ್ಥಳೀಯರು ಶಟರ್ ತೆರೆದು ನೋಡಿದಾಗ ಬೆಂಕಿ ತಗಲಿರುವುದು ಬೆಳಕಿಗೆ ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ತಕ್ಷಣ ಸ್ಥಳೀಯರು ಸೇರಿ ನೀರು ಹಾಕಿ ಬೆಂಕಿ ನಂದಿಸಲು ಯತ್ನಿಸಿದರೂ ಸಾಧ್ಯವಾಗಿಲ್ಲ. ಬೆಂಕಿ ಅಂಗಡಿಗೆ ಸಂಪೂರ್ಣ ವ್ಯಾಪಿಸಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.

ಅಗ್ನಿ ಶಾಮಕ ದಳ ಸ್ಥಳಕ್ಕಾಗಮಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಉಳ್ಳಾಲ ಪೊಲೀಸರು ಸ್ಥಳದಲ್ಲಿ ಜಮಾಯಿಸಿರುವ ಮಂದಿಯನ್ನು ಚದುರಿಸುತ್ತಿದ್ದಾರೆ.

ಇನ್ನು ಘಟನೆಗೆ ಕಾರಣ ತಿಳಿದುಬಂದಿಲ್ಲ