Saturday, April 25, 2026
ಸುದ್ದಿ

ವಿಶ್ವ ಹಿಂದೂ ಪರಿಷತ್ ನಾಯಕ ಶರಣ್ ಪಂಪ್‌ವೆಲ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ: ಅರೋಪಿಗಳು ಅರೆಸ್ಟ್- ಕಹಳೆ ನ್ಯೂಸ್

ವಿಶ್ವ ಹಿಂದು ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪುವೆಲ್ ವಿರುದ್ಧ ಹಾಗೂ ದುರ್ಗಾವಾಹಿನಿ ಸಂಘಟನೆಯ ಕುರಿತಂತೆ ವಾಟ್ಸಾಪ್ ಗ್ರೂಪ್ ನಲ್ಲಿ ಮತ್ತು ಸಾಮಾಜಿಕ ಜಾಲ ತಾಣಗಳಲ್ಲಿ ಮಾನಹಾನಿಕರ ಮತ್ತು ಅವಹೇಳನಕಾರಿ ಬರಹ ಬರೆದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.


ಸುಳ್ಯ ತಾಲೂಕಿನ ಕಸಬಾ ನಿವಾಸಿ ಭವಾನಿ ಶಂಕರ್ (32), ಬಜಾಲ್ ನೌಷಾದ್(27), ಕಾವೂರಿನ ರವಿ ಯಾನೆ ಟಿಕ್ಕಿ ರವಿ (27), ಮೂಡಬಿದಿರೆಯ ಜಯಕುಮಾರ್ (33) ಬಂಧಿತರು.ಈ ಆರೋಪಿಗಳು ಶರಣ್ ಪಂಪ್ ವೆಲ್ ವಿರುದ್ಧ ಅವಹೇಳನಕಾರಿಯಾಗಿ ಬರಹಗಳನ್ನು ಪ್ರಕಟಿಸಿದ್ದು, ಈ ಕುರಿತಂತೆ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಲಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು