Recent Posts

Sunday, April 26, 2026
ದಕ್ಷಿಣ ಕನ್ನಡಪುತ್ತೂರುಬೆಳ್ತಂಗಡಿಸುದ್ದಿಸುಬ್ರಹ್ಮಣ್ಯಸುಳ್ಯ

ದಕ್ಷಿಣ ಕನ್ನಡ ಜಿಲ್ಲೆಯ 17 ಗ್ರಾಮಗಳು ಜೂ. 21ರ ತನಕ ಸೀಲ್ ಡೌನ್ ; ಯಾವೆಲ್ಲಾ ಗ್ರಾಮಗಳು ಸೀಲ್ ಡೌನ್? – ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಆದೇಶದಲ್ಲೇನಿದೆ..!? – ಕಹಳೆ ನ್ಯೂಸ್

ಮಂಗಳೂರು, ಜೂ. 13 : ಕೊರೋನಾ ಪ್ರಮಾಣ ನಿಯಂತ್ರಿಸುವ ಹಿನ್ನೆಲೆಯಲ್ಲಿ ಪ್ರಸ್ತುತ ಸೋಂಕು ಹೆಚ್ಚಳವಾಗಿರುವ ಹದಿನೇಳು ಗ್ರಾಮಗಳನ್ನು ಸಂಪೂರ್ಣ ಲಾಕ್ ಡೌನ್ ಗೊಳಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಸೋಂಕು ಹೆಚ್ಚಿರುವ ದ.ಕ. ಜಿಲ್ಲೆಯ 17 ಗ್ರಾಪಂ.ಗಳು ಸೀಲ್ ಡೌನ್ ಮಾಡಲಾಗಿದ್ದು, ಜೂ.14ರ ಬೆಳಿಗ್ಗೆ 9 ಗಂಟೆಯಿಂದ 21ರ ಬೆಳಗ್ಗೆ 9 ಗಂಟೆಯವರೆಗೆ ಸೀಲ್ ಡೌನ್ ಜಾರಿಯಲ್ಲಿರಲಿದೆ. 17 ಗ್ರಾ.ಪಂ.ಗಳಿಗೆ ಬರುವವರಿಗೆ, ಹೋಗುವವರಿಗೆ ಕೆಲವು ನಿರ್ಬಂಧಗಳನ್ನು ಜಾರಿಗೊಳಿಸಲಾಗಿದೆ. ನರ್ಸಿಂಗ್ ಹೋಂ, ಕ್ಲಿನಿಕ್, ಲ್ಯಾಬ್, ಟೆಲಿಮೆಡಿಸಿನ್, ರಕ್ತ ಸಂಗ್ರಹ ಕೇಂದ್ರ ತೆರೆಯಲು ಅವಕಾಶ ನೀಡಲಾಗಿದೆ. ಕೆಎಂಎಫ್ ಹಾಲಿನ ಬೂತ್, ರಾಜ್ಯ, ರಾಷ್ಟ್ರ ಹೆದ್ದಾರಿ ಪೆಟ್ರೋಲ್ ಬಂಕ್ ತೆರೆಯಲು ಅವಕಾಶ ಕೊಡಲಾಗಿದೆ. ವೈದ್ಯಕೀಯ, ಇತರ ತುರ್ತು ಅಗತ್ಯ ಸೇವೆಗೆ ವಾಹನ ಓಡಾಟಕ್ಕೆ ಅನುಮತಿಸಲಾಗಿದೆ. ಗ್ರಾಮಸ್ಥರಿಗೆ ಅಗತ್ಯ ವಸ್ತುಗಳ ಪೂರೈಕೆಗೆ ಗ್ರಾಮಪಡೆಗಳು ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ.

ಯಾವ ಗ್ರಾಮಗಳು ಸೀಲ್ ಡೌನ್?

ಮಂಗಳೂರು ತಾಲೂಕಿನ ಕೊಣಾಜೆ ಮತ್ತು ನೀರುಮಾರ್ಗ,

ಬೆಳ್ತಂಗಡಿ ತಾಲೂಕಿನ ನಾರಾವಿ, ಕೊಯ್ಯೂರು, ಮಿತ್ತಬಾಗಿಲು,

ಮಾಲಾಡಿ, ನೆರಿಯ, ಲಾಯಿಲ, ಉಜಿರೆ ಮತ್ತು ಚಾರ್ಮಾಡಿ

ಸುಳ್ಯ ತಾಲೂಕಿನ ಐವರ್ನಾಡು, ಅಮರ ಮುಡ್ನೂರು,

ಕೊಲ್ಲಮೊಗರು, ಗುತ್ತಿಗಾರು, ಅರಂತೋಡು,

ಕಡಬ ತಾಲೂಕಿನ ಸುಬ್ರಮಣ್ಯ ಹಾಗೂ ಸವಣೂರು ಸೀಲ್ಡೌನ್