Monday, March 9, 2026
ಬೆಳ್ತಂಗಡಿ

ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತಾರಂಭ ಹಾಗೂ ಅನ್ನಛತ್ರದ ಶಿಲಾನ್ಯಾಸ ಕಾರ್ಯಕ್ರಮ-ಕಹಳೆ ನ್ಯೂಸ್

ಧರ್ಮಸ್ಥಳ: ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶಾರಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತಾರಂಭ ಶ್ರೀ ಗುರುದೇವ ಮಠದಲ್ಲಿ ಶ್ರೀ ಲಕ್ಷ್ಮೀಪತಿ ಗೋಪಾಲಚಾರ್ಯರು, ಆಗಮ ಪ್ರವೀಣ ಬೆಂಗಳೂರು ಇವರ ಪೌರೋಹಿತ್ಯದಲ್ಲಿ ಮತ್ತು ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನ ಕನ್ಯಾಡಿ ಧರ್ಮಸ್ಥಳ ಇದರ ಅನ್ನಛತ್ರದ ಶಿಲಾನ್ಯಾಸವನ್ನು ಶಾಸಕ ಹರೀಶ ಪೂಂಜ ಅವರು ನೆರವೇರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಇನ್ನು ಚಾತುರ್ಮಾಸ್ಯ ವೃತದ ಸಮಾಪ್ತಿಯು ತಾ.02-09-2021ನೇ ಗುರುವಾರದಂದು ಮುಕ್ತಾಯಗೊಂಡು ಅದೇ ದಿನ ಬೆಳಿಗ್ಗೆ ಶ್ರೀಗಳವರ ಸೀಮೋಲ್ಲಂಘನ ಕಾರ್ಯಕ್ರಮ, ನೇತ್ರಾವತಿ ಸ್ನಾನಘಟ್ಟದಲ್ಲಿ ನಡೆಯಲಿರುವುದು. ತದನಂತರ ತನ್ನ ಆರಾಧ್ಯ ದೇವರಿಗೆ ವಿಶೇಷ ಪೂಜಾ ಕೈಂಕರ್ಯಗಳು ನಡೆಯಲಿರುವುದು. ಬಳಿಕ ತಾ.03-09-2021ನೇ ಶುಕ್ರವಾರದಂದು ಶ್ರೀ ಗುರುದೇವ ಮಠದಲ್ಲಿ ಶ್ರೀಗಳವರ ಪಟ್ಟಾಭಿಷೇಕದ ವರ್ಧಂತಿಯು ವೈಭವದಿಂದ ನಡೆಯಲಿರುವುದು.

ಇನ್ನು ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೆ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಶ್ರೀರಾಮಚಂದ್ರ ದೇವರ ಕೃಪೆಗೆ ಪಾತ್ರರಾಗಿ, ಗುರುಗಳಿಂದ ಮಂತ್ರಾಕ್ಷತೆಯನ್ನು ಪಡೆದು ಪುನೀತರಾಗಬೇಕಾಗಿ ಕ್ಷೇತ್ರ ಮಹಾಸಂಸ್ಥಾನಮ್‍ನ ಆಡಳಿತ ಸಮಿತಿ ಸದಸ್ಯರು ವಿನಂತಿಸಿಕೊಂಡಿದ್ದಾರೆ.