ಬಂಟ್ವಾಳ: ಸೋರ್ಣಾಡು ಸಮೀಪ ಅರಳ ಗ್ರಾಮದ ಅರ್ಬ ನಿವಾಸಿ ಐವನ್ ಪಿಂಟೊ ಎಂಬುವರ ಜಮೀನಿನಲ್ಲಿ ಹಾದು ಹೋಗಿರುವ ಮಂಗಳೂರು-ಬೆಂಗಳೂರು ನಡುವಿನ ತೈಲ ಸರಬರಾಜು ಸಂಸ್ಥೆಗೆ ಸೇರಿದ ಡೀಸೆಲ್ ಪೂರೈಸುವ ಪೈಪ್ ಲೈನ್ ಗೆ ಕನ್ನ ಕೊರೆದು ಡೀಸೆಲ್ ಕಳವು ಮಾಡುವ ದಂಧೆಗೆ ಸಂಬಂಧಿಸಿದಂತೆ ಗ್ರಾಮಾಂತರ ಠಾಣೆ ಪೊಲೀಸರು ಆರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಇವರಿಂದ ಲಕ್ಷಾಂತರ ಮೌಲ್ಯದ ಡೀಸೆಲ್ ಕ್ಯಾನ್ ವಶಪಡಿಸಿಕೊಂಡಿದ್ದಾರೆ. ಇನ್ಸ್ಪೆಕ್ಟರ್ ಟಿ.ಡಿ.ನಾಗರಾಜ್ ಮತ್ತು ಎಸ್ಐ ಪ್ರಸನ್ನ ಎಂ. ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಪ್ರಮುಖ ಆರೋಪಿಯಾದ ಐವನ್ ಪಿಂಟೊ ಸಹಿತ ಹಲವರನ್ನು ವಶಕ್ಕೆ ಪಡೆದಿದ್ದಾರೆ. ದಂಧೆಯಲ್ಲಿ ಪಾಲ್ಗೊಂಡ ಹಲವಾರು ಮಂದಿ ತಲೆಮರೆಸಿ ಕೊಂಡಿದ್ದಾರೆ.
You Might Also Like
ಅಲ್ಲಿಪಾದೆ ಶ್ರೀರಾಮ ಭಜನಾ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸನ ಶಿಬಿರ- ಕಹಳೆ ನ್ಯೂಸ್
ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ( ರಿ.) ಬಂಟ್ವಾಳ,,ಕೆ. ಏಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ, ಶ್ರೀರಾಮ ಭಜನಾ ಮಂದಿರ...
ಶ್ರೀ ಉಮಾ ಶಿವಾ ಕ್ಷೇತ್ರ ಗೇರುಕಟ್ಟೆ ಕಲ್ಲಡ್ಕ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜುರಾದ ಅನುದಾನದ ಡಿಡಿ ಹಸ್ತಾಂತರ -ಕಹಳೆ ನ್ಯೂಸ್
ಕಲ್ಲಡ್ಕ : ಕಲ್ಲಡ್ಕ ಗೇರುಕಟ್ಟೆ ಶ್ರೀ ಉಮಾ ಶಿವ ಕ್ಷೇತ್ರದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ರೂ ಒಂದು ಲಕ್ಷದ...
ನರಿಕೊಂಬು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮ – ಕಹಳೆ ನ್ಯೂಸ್
ಬಂಟ್ವಾಳ : ಬಂಟ್ವಾಳ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನರಿಕೊಂಬು ಇಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮ ಮಾರ್ಚ್ 4 ಬುಧವಾರ ಜರಗಿತು. ಬಂಟ್ವಾಳ ಸಮೂಹ...
ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೆ ಟಿಪ್ಪರ್ ಲಾರಿಯಲ್ಲಿ ಮಣ್ಣು ಸಾಗಾಟ – ಸಾರ್ವಜನಿಕರ ಆಕ್ರೋಶ – ಕಹಳೆ ನ್ಯೂಸ್
ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಬಿ.ಸಿ ರೋಡು ಮಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಪ್ಪರ್ ಲಾರಿ ಮೂಲಕ ಮಣ್ಣು ಸಾಗಿಸುತ್ತಿದ್ದ ಬಗ್ಗೆ ವರದಿಯಾಗಿದೆ. ಟಿಪ್ಪರ್ ಲಾರಿಯಲ್ಲಿ ಮಣ್ಣು...














