
ಧರ್ಮಸ್ಥಳ: ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮನಾದ ಸರಸ್ವತಿ ಸ್ವಾಮೀಜಿ ಯವರ ಚಾತುರ್ಮಾಸ್ಯ ಸಂದರ್ಭದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು ಗಳ 167ನೇ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜಾ, ತಹಶೀಲ್ದಾರ್ ಮಹೇಶ್ ಜೆ., ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ, ಶಿವ ಪ್ರಸಾದ್ ಅಜಿಲ, ಪಟ್ಟಣ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ, ಮುಖ್ಯಾಧಿಕಾರಿ ಸುಧಾಕರ, ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.















