Recent Posts

Saturday, April 25, 2026
ಅಂತಾರಾಷ್ಟ್ರೀಯರಾಷ್ಟ್ರೀಯಸುದ್ದಿ

ಫೇಸ್ ಬುಕ್, ವಾಟ್ಸಾಪ್, ಇನ್ಸ್ಟಾಗ್ರಾಮ್ ಸೇವೆಯಲ್ಲಿ ವ್ಯತ್ಯಯ | ಮೆಸೇಜ್ ಹೋಗುತ್ತಿಲ್ಲ, ಬರುತ್ತಿಲ್ಲ.. ರೀಸ್ಟಾರ್ಟ್ ಮಾಡಿ ಮಾಡಿ ರಾತ್ರಿಯಿಡೀ ಪರದಾಡಿದ ಸಾಮಾಜಿಕ ಜಾಲತಾಣ ಪ್ರೀಯರು – ಕಹಳೆ ನ್ಯೂಸ್

ನವದೆಹಲಿ, ಅ. 05 : ಫೇಸ್ ಬುಕ್, ವಾಟ್ಸಾಪ್, ಇನ್ಸ್ಟಾಗ್ರಾಮ್ ಸೇವೆಯಲ್ಲಿ ವ್ಯತ್ಯಯವಾಗಿದ್ದು, ಸಾರ್ವಜನಿಕರು ಪರದಾಡುವಂತಾಗಿದೆ. ಈ ನಡುವೆ ಉಂಟಾಗಿರುವ ವ್ಯತ್ಯಯಕ್ಕೆ ಫೇಸ್ ಬುಕ್ ಸಂಸ್ಥೆ ಕ್ಷಮೆಯಾಚಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ಉಂಟಾಗಿರುವ ವ್ಯತ್ಯಯದಿಂದಾಗಿ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಸಂದೇಶಗಳನ್ನು ಕಳುಹಿಸಲು ಅಥವಾ ಸ್ವೀಕರಿಸಲು ಸಾಧ್ಯವಾಗದ ಕಾರಣ ಭಾರತ ಸೇರಿದಂತೆ ವಿಶ್ವದಾದ್ಯಂತ ಲಕ್ಷಾಂತರ ಗ್ರಾಹಕರು ಪರದಾಡುವಂತಾಗಿದೆ.

ವಾಟ್ಸಾಪ್ ಸ್ಥಗಿತಗಳನ್ನು ಟ್ರ್ಯಾಕ್ ಮಾಡುವ ವೆಬ್‌ಸೈಟ್ ಡೌನ್‌ಟೆಕ್ಟರ್ ಪ್ರಕಾರ, ಶೇ. 40 ರಷ್ಟು ಬಳಕೆದಾರರಿಗೆ ಆಪ್ ಡೌನ್‌ಲೋಡ್ ಮಾಡಲು ಸಾಧ್ಯವಾಗಲಿಲ್ಲ. ಶೇ. 30 ರಷ್ಟು ಜನರಿಗೆ ಸಂದೇಶ ಕಳುಹಿಸಲು ತೊಂದರೆಯಾಗಿದೆ ಮತ್ತು ಶೇ. 22 ರಷ್ಟು ಜನರು ವೆಬ್ ಆವೃತ್ತಿಯಲ್ಲಿ ಸಮಸ್ಯೆಗಳನ್ನು ಹೊಂದಿದ್ದಾರೆ.

ಇನ್ನು ಈ ನಡುವೆ ಸಂಸ್ಥೆ ಕ್ಷಮೀಯಾಚಿಸಿದ್ದು ಏನೋ ತಪ್ಪಾಗಿದೆ. ಇದರ ಮೇಲೆ ಕೆಲಸ ಮಾಡಲಾಗುತ್ತಿದೆ. ಆದಷ್ಟು ಬೇಗ ಅದನ್ನು ಸರಿಪಡಿಸುತ್ತೇವೆ ಎಂದು ಫೇಸ್ ಬುಕ್  ವೆಬ್ ಸೈಟ್  ನಲ್ಲಿ ಸಂದೇಶವೊಂದನ್ನು ಹಾಕಲಾಗಿದೆ.