Sunday, April 26, 2026
ದಕ್ಷಿಣ ಕನ್ನಡ

ವಿನಾಕಾರಣ ವಿಶ್ವ ಹಿಂದು ಪರಿಷತ್ ಕಾರ್ಯಕರ್ತನ ಮೇಲೆ ಪೊಲೀಸ್ ದೌರ್ಜನ್ಯ – ಪೊಲೀಸ್ ಸಿಬ್ಬಂದಿಗಳ ಅಮಾನತಿಗೆ ವಿಶ್ವ ಹಿಂದು ಪರಿಷತ್ ಆಗ್ರಹ-ಕಹಳೆ ನ್ಯೂಸ್

ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ಬಳಿಯಿಂದ 10 ಅಕ್ಟೋಬರ್ ಭಾನುವಾರ ರಾತ್ರಿ ಜಗದೀಶ್ ಎಂಬ ವಿಶ್ವ ಹಿಂದು ಪರಿಷತ್ ಕಾರ್ಯಕರ್ತನನ್ನು ಠಾಣೆಗೆ ವಿನಾಕಾರಣ ಕರೆದುಕೊಂಡು ಹೋಗಿ, ದೈಹಿಕ ದೌರ್ಜನ್ಯ ನಡೆಸಿದ್ದಾರೆ.

ಯಾವುದೊ ಒಂದು ಘಟನೆಯನ್ನು ಕಾರಣವಾಗಿ ಮುಂದಿಟ್ಟುಕೊಂಡು ರಾತ್ರಿ ಪೂರ್ತಿ ಠಾಣೆಯಲ್ಲಿ ಕೂಡುಹಾಕಿ ಬಟ್ಟೆಕಳಚಿ ಠಾಣೆಯ ಸಿಬ್ಬಂದಿಗಳಾದ ಪ್ರತಾಪ್, ಸಂಗಯ್ಯ ಮತ್ತು ಶೇಖರ್ ಎಂಬವರು ದೊಣ್ಣೆಯಿಂದ ಹೊಡೆದು, ಬೂಟ್ ಕಾಲಿನಿಂದ ಹೊಡೆದದ್ದು ಅಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡಿರುತ್ತಾರೆ.ನಿನ್ನೆ 11 ಅಕ್ಟೋಬರ್ ಸೋಮವಾರ ಸಂಜೆ ಅವರನ್ನು ಠಾಣೆಯಿಂದ ಬಿಟ್ಟು ಕಳಿಸಿದ್ದು, ಆ ಸಂದರ್ಭದಲ್ಲಿ ಅವರು ನಡೆಯಲಾಗದೆ ತುಂಬಾ ಅಸ್ವಸ್ಥಗೊಂಡಿದ್ದು ಚಿಕಿತ್ಸೆಗಾಗಿ ವೆನ್ ಲಾಕ್ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ನಿರಪರಾಧಿಯಾದ ಜಗದೀಶನ ಮೇಲೆ ವಿನಾಕಾರಣ ದೈಹಿಕವಾಗಿ ಹಲ್ಲೆ ನಡೆಸಿದ ಸಿಬ್ಬಂದಿಗಳಾದ ಪ್ರತಾಪ್, ಸಂಗಯ್ಯ ಮತ್ತು ಶೇಖರ್ ಎಂಬವರ ಮೇಲೆ ತಕ್ಷಣ ಕೇಸು ದಾಖಲಿಸಿ ಕಾನೂನುಕ್ರಮ ಕೈಗೊಂಡು ಅವರನ್ನು ಕೆಲಸದಿಂದ ವಜಾ ಮಾಡಬೇಕಾಗಿ ಜಿಲ್ಲಾ ವರಿಷ್ಠಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು ಹಾಗು ವೆನ್ ಲಾಕ್ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜಗದೀಶ್ ಅವರನ್ನು ವಿಭಾಗ ಕಾರ್ಯದರ್ಶಿ ಶರಣ್ ಪಂಪುವೆಲ್, ಉಪಾಧ್ಯಕ್ಷರಾದ ಭಾಸ್ಕರ್ ಧರ್ಮಸ್ಥಳ, ಪುತ್ತೂರು ಜಿಲ್ಲಾ ಕಾರ್ಯದರ್ಶಿ ಸತೀಶ್ ಭೇಟಿ ಮಾಡಿ ಧೈರ್ಯ ತುಂಬಿದರು.