Friday, March 13, 2026
ಸುದ್ದಿ

ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಹತ್ತನೇ ತರಗತಿ ವಿದ್ಯಾರ್ಥಿನಿ- ಕಹಳೆ ನ್ಯೂಸ್

ಉಪ್ಪಿನಂಗಡಿ: ಹತ್ತನೇ ತರಗತಿ ವಿದ್ಯಾರ್ಥಿನಿ ಹೆಣ್ಣು ಮಗುವಿಗೆ ಸಹಜ ಹೆರಿಗೆಯಲ್ಲಿ ಜನ್ಮ ನೀಡಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರೌಢಶಾಲೆಯೊಂದರಲ್ಲಿ ಪ್ರಸಕ್ತ ಹತ್ತನೇ ತರಗತಿ ಕಲಿಯುತ್ತಿರುವ ವಿದ್ಯಾರ್ಥಿನಿಯ ಉದರದಲ್ಲಿ ಗೆಡ್ಡೆ ಬೆಳೆದಿದೆ ಎಂದು ತಿಳಿದು ಹೆತ್ತವರು ಆಸ್ಪತ್ರೆಗೆ ದಾಖಲಿಸಿದಾಗ ಆಕೆ ತುಂಬು ಗರ್ಭವತಿಯಾಗಿರುವುದು ಬೆಳಕಿಗೆ ಬಂದಿದ್ದು, ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಸಹಜ ಹೆರಿಗೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಆಸ್ಪತ್ರೆಯ ವೈದ್ಯಾಧಿಕಾರಿಗಳು ಪ್ರಕರಣವನ್ನು ಉಪ್ಪಿನಂಗಡಿ ಪೆÇಲೀಸರ ಗಮನಕ್ಕೆ ತಂದಿದ್ದರು.

ಜಾಹೀರಾತು
ಜಾಹೀರಾತು

ಈ ಬಗ್ಗೆ ವಿದ್ಯಾರ್ಥಿನಿಯನ್ನು ವಿಚಾರಿಸಿದಾಗ ಹಿರೆಬಂಡಾಡಿ ಗ್ರಾಮದ ಮದ್ಮೆತ್ತಿಮಾರು ಮನೆ ನಿವಾಸಿ ಕೇಶವ (34) ಅತ್ಯಾಚಾರವೆಸಗಿರುವುದನ್ನು ತಿಳಿಸಿದ್ದಾಳೆ.
ಈ ಹಿನ್ನೆಲೆಯಲ್ಲಿ ಅವಿವಾಹಿತ ಕೇಶವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಅಪ್ರಾಪ್ತ ವಯಸ್ಕರ ಮೇಲಿನ ಅತ್ಯಾಚಾರ ನಿಯಂತ್ರಣ ಕಾಯ್ದೆಯಡಿ ಉಪ್ಪಿನಂಗಡಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.