Wednesday, May 22, 2024
ಮಾರುಕಟ್ಟೆರಾಜಕೀಯರಾಷ್ಟ್ರೀಯಸುದ್ದಿ

ಕೇಂದ್ರ ಸರ್ಕಾರವು ಚಳಿಗಾಲದ ಅಧಿವೇಶನದಲ್ಲಿ ಕ್ರಿಪ್ಟೋಕರೆನ್ಸಿ ನಿಷೇಧದ ಸುಳಿವು ; ಪ್ರಮುಖ ಕ್ರಿಪ್ಟೋಕರೆನ್ಸಿಗಳ ಮೌಲ್ಯದಲ್ಲಿ ಭಾರಿ ಕುಸಿತ – ಕಹಳೆ ನ್ಯೂಸ್

ದೆಹಲಿ : ದೇಶದಲ್ಲಿನ ಎಲ್ಲಾ ಖಾಸಗಿ ಕ್ರಿಪ್ಟೋಕರೆನ್ಸಿಗಳನ್ನು ನಿಷೇಧಿಸುವ ಮಸೂದೆಯನ್ನು ಕೇಂದ್ರ ಸರ್ಕಾರವು ಚಳಿಗಾಲದ ಅಧಿವೇಶನದಲ್ಲಿ ಮಂಡನೆ ಮಾಡಲಿದೆ ಎಂಬ ವರದಿಗಳ ಬೆನ್ನಲ್ಲೇ, ಪ್ರಮುಖ ಕ್ರಿಪ್ಟೋಕರೆನ್ಸಿಗಳ ಮೌಲ್ಯದಲ್ಲಿ ಭಾರಿ ಕುಸಿತ ಕಂಡುಬಂದಿದೆ.

ಜಾಹೀರಾತು
ಜಾಹೀರಾತು

ಭಾರತೀಯ ವಿನಿಮಯ ಕೇಂದ್ರಗಳಲ್ಲಿನ ಡಿಜಿಟಲ್ ಕರೆನ್ಸಿಗಳು ತಮ್ಮ ಜಾಗತಿಕ ದೇಶಗಳಿಗೆ ಹೋಲಿಸಿದರೆ 25% ವರೆಗೆ ಕುಸಿತ ಕಂಡುಬಂದಿದೆ. ಮಂಗಳವಾರ ರಾತ್ರಿಯಿಂದಲೇ ಪ್ರಮುಖ ಕ್ರಿಪ್ಟೋಕರೆನ್ಸಿಗಳ ಮೌಲ್ಯದಲ್ಲಿ ಶೇ 15ರಷ್ಟು ಇಳಿಕೆ ಕಂಡುಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನವೆಂಬರ್ 29 ರಿಂದ ಪ್ರಾರಂಭವಾಗುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಆರ್‌ಬಿಐಯಿಂದ “ಕ್ರಿಪ್ಟೋಕರೆನ್ಸಿ ಮತ್ತು ಅಧಿಕೃತ ಡಿಜಿಟಲ್ ಕರೆನ್ಸಿ ಬಿಲ್,ನಿಯಂತ್ರಣ ಮಸೂದೆ 2021” ಅನ್ನು ಮಂಡಿಸಲು ತಾತ್ಕಾಲಿಕ ಪಟ್ಟಿಯಲ್ಲಿ ಸೇರಿಸಲಾಗಿದೆ ಎಂದು ಮಂಗಳವಾರ ವರದಿಯಾಗಿತ್ತು

ಜಾಹೀರಾತು
ಜಾಹೀರಾತು

ಮಸೂದೆಯು ಭಾರತದಲ್ಲಿನ ಎಲ್ಲಾ ಖಾಸಗಿ ಕ್ರಿಪ್ಟೋಕರೆನ್ಸಿಗಳನ್ನು ನಿಷೇಧಿಸಲು ಪ್ರಯತ್ನಿಸುತ್ತದೆ, ಆದರೆ ಕ್ರಿಪ್ಟೋಕರೆನ್ಸಿಯ ಆಧಾರವಾಗಿರುವ ತಂತ್ರಜ್ಞಾನ ಮತ್ತು ಅದರ ಬಳಕೆಗಳನ್ನು ಉತ್ತೇಜಿಸಲು ಕೆಲವು ವಿನಾಯಿತಿಗಳನ್ನು ಅನುಮತಿಸುತ್ತದೆ ಎಂದು ಸರ್ಕಾರವು ಲೋಕಸಭೆಯ ವೆಬ್‌ಸೈಟ್‌ನಲ್ಲಿ ಅಧಿಸೂಚನೆಯಲ್ಲಿ ತಿಳಿಸಿದೆ.

ಜಾಹೀರಾತು

ಬಿಟ್‌ಕಾಯಿನ್‌ ಮೌಲ್ಯದಲ್ಲಿ ಶೇ 17, ಎಥೇರಿಯಂ ಶೇ 15 ಹಾಗೂ ಟೆದರ್ ಮೌಲ್ಯದಲ್ಲಿ ಶೇ 18ರಷ್ಟು ಇಳಿಕೆಯಾಗಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಸೋಲಾನಾ, ಕಾರ್ಡಾನೊ ಹಾಗೂ ಬಿನಾನ್ಸ್ ಮೌಲ್ಯದಲ್ಲಿಯೂ ಕುಸಿತ ಕಂಡುಬಂದಿದೆ. ಸೋಲಾನಾ ಮೌಲ್ಯ ಶೇ 1.24ರಷ್ಟು, ಕಾರ್ಡಾನೊ ಮೌಲ್ಯ ಶೇ 6.62ರಷ್ಟು ಇಳಿಕೆಯಾಗಿದೆ ಎಂದು ವರದಿಗಳು ಉಲ್ಲೇಖಿಸಿವೆ.