Thursday, March 12, 2026
ದಕ್ಷಿಣ ಕನ್ನಡಸುದ್ದಿ

15ರಿಂದ 18 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ : ಮಂಗಳೂರಿನಲ್ಲಿ ಕೋವಿಡ್ ಲಸಿಕಾಕರಣವನ್ನ ಉದ್ಘಾಟಿಸಿದ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ವೇದವ್ಯಾಸ್ ಕಾಮತ್ –ಕಹಳೆ ನ್ಯೂಸ್

15 ರಿಂದ 18 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯ ಇಂದಿನಿಂದ ಆರಂಭವಾಗಿದ್ದು ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕರಾದ ವೇದವ್ಯಾಸ್ ಕಾಮತ್ ಅವರು ಕೋವಿಡ್ ಲಸಿಕಾಕರಣವನ್ನ ಉದ್ಘಾಟಿಸಿದರು.

ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಬಂದರು ಇದರ ವತಿಯಿಂದ, 15ರಿಂದ 18 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕಾಕರಣ ಆರಂಭವಾಗಿದೆ. ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿಗಳಾದ ಡಾ. ರಾಜೇಂದ್ರ, ಪಾಲಿಕೆ ಸದಸ್ಯರಾದ ಪೂರ್ಣಿಮಾ, ದಿವಾಕರ್ ಪಾಂಡೇಶ್ವರ, ಅಧಿಕಾರಿಗಳು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು