Recent Posts

Saturday, April 25, 2026
ದಕ್ಷಿಣ ಕನ್ನಡಪುತ್ತೂರುಸುದ್ದಿ

ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ ಹಾಗೂ ಗಣಹೋಮ – ಕಹಳೆ ನ್ಯೂಸ್

ಪುತ್ತೂರು: ಬದುಕಿನ ಸವಾಲುಗಳನ್ನು ಎದುರಿಸುವ ಆತ್ಮವಿಶ್ವಾಸವನ್ನು ಉತ್ತಮ ಗುಣಮಟ್ಟದ ಶಿಕ್ಞಣದಿಂದ ಪಡೆಯಲು ಸಾಧ್ಯ. ವಿದ್ಯಾರ್ಥಿಗಳೆಲ್ಲರೂ ವಿದ್ಯೆಯ ಪ್ರಾಮುಖ್ಯತೆಯನ್ನು ಅರಿತು ಅದರ ಸದುಪಯೋಗವನ್ನು ಪಡೆಯಬೇಕು.ಈ ಮೂಲಕ ಆ ದೇವರ ಅನುಗ್ರಹ ಪ್ರಾಪ್ತಿಯಾಗಲಿ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಜೊತೆ ಕಾರ್ಯದರ್ಶಿಯಾದ ಶ್ರೀಮತಿ ರೂಪಲೇಖ ಶುಭಹಾರೈಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವದ ಅಂಗವಾಗಿ ಗಣಹೋಮ ಮತ್ತು ಸರಸ್ವತಿ ಪೂಜೆ ಕಾರ್ಯಕ್ರಮವು ಎಲ್ಲಾ ವಿಧಿವಿಧಾನಗಳೊಂದಿಗೆ ಶ್ರೀಯುತ ಕಾರ್ತಿಕ್ ಶಾಸ್ತ್ರಿ. ಆದಿತ್ಯನಾರಾಯಣ ಮತ್ತು ಹರಿಪ್ರಸಾದ್ ಅವರ ನೇತೃತ್ವದಲ್ಲಿ ಜರಗಿತು.

ಈ ಕಾರ್ಯಕ್ರಮದಲ್ಲಿ ನರೇಂದ್ರ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಕಾಂತ ಕೊಳತ್ತಾಯ,ಸಂಚಾಲಕರಾದ ಸಂತೋಷ ಬಿ.ಸದಸ್ಯರಾದ ಪ್ರಸನ್ನ ಕುಮಾರ್,ಮೋಹಿನಿ ದಿವಾಕರ ,ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ,ಉಪನ್ಯಾಕರು,ಪೋಷಕರು ಮತ್ತು ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿ ಸಮೂಹ ಭಾಗವಹಿಸಿದ್ದರು.