Tuesday, March 10, 2026
ದಕ್ಷಿಣ ಕನ್ನಡಸುದ್ದಿ

ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಪ್ರದೇಶಗಳಿಗೆ ತೆರಳಿ ಜನಸಾಮಾನ್ಯರು ಅನುಭವಿಸಿದ ನಷ್ಟ ಮತ್ತು ಹಾನಿಯನ್ನು ಪರಿಶೀಲಿಸಿದ ಶಾಸಕ ಡಾ.ವೈ. ಭರತ್ ಶೆಟ್ಟಿ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಪ್ರದೇಶಗಳಿಗೆ ತೆರಳಿ ಜನಸಾಮಾನ್ಯರು ಅನುಭವಿಸಿದ ನಷ್ಟ ಮತ್ತು ಹಾನಿಯನ್ನು ಶಾಸಕರಾದ ಡಾ.ಭರತ್ ಶೆಟ್ಟಿಯವರು ಪರಿಶೀಲಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಬಳಿಕ ಸಂತ್ರಸ್ತರೊಂದಿಗೆ ಮಾತನಾಡಿದ ಶಾಸಕರು ಸರಕಾರದಿಂದ ಗರಿಷ್ಟ ಪರಿಹಾರ ಕೊಡಿಸಲು ಮಾಡಬೇಕಾದ ಪ್ರಕ್ರಿಯೆಗಳನ್ನು ಆರಂಭಿಸಿರುವುದಾಗಿ ತಿಳಿಸಿದರು. ನಾಗರಿಕರು ಆತಂಕಪಡುವ ಅಗತ್ಯ ಇಲ್ಲ. ನಿಮ್ಮೊಂದಿಗೆ ನಾವು, ಸರಕಾರ ಮತ್ತು ಜಿಲ್ಲಾಡಳಿತ ಇದ್ದೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಪಾಲಿಕೆ ಸದಸ್ಯರಾದ ಸುಮಿತ್ರಾ, ಸುನೀತಾ, ರಾಜೇಶ್,ರಂಜನಿ ಕೋಟ್ಯಾನ್, ಅಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.