ಸುರತ್ಕಲ್ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನೂತನ ದಂತ ವೈದ್ಯಕೀಯ ಕೇಂದ್ರ ಉದ್ಘಾಟಿಸಿದ ಶಾಸಕ ಡಾ.ವೈ. ಭರತ್ ಶೆಟ್ಟಿ – ಕಹಳೆ ನ್ಯೂಸ್

ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸ್ ವತಿಯಿಂದ ಉತ್ತಮ ಗುಣಮಟ್ಟದ ದಂತ ಚಿಕಿತ್ಸೆ ತಜ್ಞ ವೈದ್ಯರಿಂದ ಉಚಿತವಾಗಿ ಸುರತ್ಕಲ್ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಗಲಿದೆ ಎಂದು ಮಂಗಳೂರು ನಗರ ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿಯವರು ಹೇಳಿದರು
ಅವರು ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್ ಮಂಗಳೂರು ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇದರ ವತಿಯಿಂದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಸುರತ್ಕಲ್ ನಲ್ಲಿ ಪ್ರಾರಂಭಿಸಲಾದ ದಂತ ವೈದ್ಯಕೀಯ ಕೇಂದ್ರವನ್ನು ಉದ್ಘಾಟಿಸಿ ಶುಭ ಹಾರೈಸಿದ ಬಳಿಕ ಪರಿಸರದಲ್ಲಿ ಗಣ್ಯರೊಂದಿಗೆ ಸೇರಿ ಗಿಡ ನೆಟ್ಟರು.

ಇದೇ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಕಿಶೋರ್ ಕುಮಾರ್, ತಾಲೂಕು ಆರೋಗ್ಯ ಅಧಿಕಾರಿ ಡಾ. ಸುಜಯ್ ಭಂಡಾಲ, ಪೆÇ್ರ. ಉಪ ಕುಲಪತಿ (ಮಂಗಳೂರು ವಿಭಾಗ) ಮಾಹೆ ಮಣಿಪಾಲ ಇದರ ಡಾ.ದಿಲೀಪ್ ನಾಯಕ್, ಡಾ. ಉನ್ನಿಕೃಷ್ಣನ್ ಚಿ. ಡೀನ್, ಕೆಎಂಸಿ ಮಂಗಳೂರು, ಡಾ. ಅಶಿತಾ ಎಸ್.
ಡಾ. ಭಾಸ್ಕರ್ ಕೋಟ್ಯಾನ್, ಆಡಳಿತ ವೈದ್ಯಕೀಯ ಅಧಿಕಾರಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಸುರತ್ಕಲ್, ಪಾಲಿಕೆ ಸದಸ್ಯರು, ಗಣ್ಯರು ಉಪಸ್ಥಿತರಿದ್ದರು.














