Wednesday, March 11, 2026
ಉಡುಪಿಕ್ರೈಮ್ರಾಜ್ಯಸುದ್ದಿ

ಉಡುಪಿ ಇಂದ್ರಾಳಿ ರೈಲ್ವೆ ನಿಲ್ದಾಣ ರಸ್ತೆಯಲ್ಲಿ ಕೊಲೆ ; ಕುಡಿದ ಅಮಲಿನಲ್ಲಿ ತಾಯಿಯನ್ನು ನಿಂದಿಸಿದಾತನನ್ನು ಕೊಲೆ ಮಾಡಿದ ವ್ಯಕ್ತಿ – ಕಹಳೆ ನ್ಯೂಸ್

ಉಡುಪಿ, ಜು 20 : ಕುಡಿದ ಅಮಲಿನಲ್ಲಿ ತಾಯಿಗೆ ನಿಂದಿಸಿದ ಎಂದು ವ್ಯಕ್ತಿಯನ್ನು ಕೊಲೆ ಮಾಡಿದ ಘಟನೆ ಮಣಿಪಾಲದ ರಾ. ಹೆದ್ದಾರಿ 169A ನಿಂದ ಇಂದ್ರಾಳಿ ರೈಲ್ವೆ ನಿಲ್ದಾಣದ ಕಡೆಗೆ ಹೋಗುವ ರಸ್ತೆಯಲ್ಲಿ ಗುರುವಾರ ಸಂಜೆ ನಡೆದಿದೆ. ತಮಿಳುನಾಡು ಮೂಲದ ಕುಮಾರ್(32) ಕೊಲೆಯಾದ ವ್ಯಕ್ತಿ.

 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕುಟ್ಟಿ ಮತ್ತು ನವೀನ್ ಎಂಬುವವರು ಇಂದ್ರಾಳಿ ಗುರು ಬಾರ್ ನಿಂದ ಮದ್ಯಪಾನ ಮಾಡಿ ನಡೆದುಕೊಂಡು ಬರುವಾಗ ಕುಮಾರ್ (32) ಎಂಬುವವನು ಕುಡಿದ ಅಮಲಿನಲ್ಲಿ ನವೀನ್ ಮತ್ತು ಕುಟ್ಟಿಯ ತಾಯಿಗೆ ಅವಾಚ್ಯ ಶಬ್ದಗಳಿಂದ ಬೈದಿದ್ದು, ಮೂವರ ನಡುವೆ ಮಾತಿಗೆ ಮಾತು ಬೆಳೆದಿರುತ್ತದೆ.

ಜಾಹೀರಾತು
ಜಾಹೀರಾತು

ನಂತರ ನವೀನ್ ಮತ್ತು ಕುಟ್ಟಿ ಸೇರಿ ಮರದ ಸೊಂಟೆ ಯಿಂದ ಕುಮಾರನ ತಲೆಗೆ ಹೊಡೆದಾಗ ಆತನು ಸ್ಥಳದಲ್ಲೇ ಮೃತಪಟ್ಟಿರುತ್ತಾನೆ. ಮೃತದೇಹವನ್ನು ಉಡುಪಿ ಅಜ್ಜರಕಾಡು ಜಿಲ್ಲಾ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಸ್ಥಳಕ್ಕೆ ಉಡುಪಿ ನಗರ ಠಾಣಾ ಪೊಲೀಸರು ಆಗಮಿಸಿದ್ದು, ಇನ್ನಷ್ಟೇ ಪ್ರಕರಣ ದಾಖಲಾಗಬೇಕಾಗಿದೆ.