Recent Posts

Saturday, April 25, 2026
ಸುದ್ದಿ

ಶಿರಾಡಿಘಾಟ್ ನಲ್ಲಿ ಲಾರಿ-ಬಸ್ ಗಳಿಗೆ ಗ್ರೀನ್ ಸಿಗ್ನಲ್ – ಕಹಳೆ ನ್ಯೂಸ್

ಹಾಸನ: ರಾಷ್ಟ್ರೀಯ ಹೆದ್ದಾರಿ 75 ದೋಣಿಗಾಲ್ ಶಿರಾಡಿಘಾಟ್ ಮಾರ್ಗದಲ್ಲಿ ಲಾರಿ ಮತ್ತು ಬಸ್ ಸೇರಿದಂತೆ ಎಲ್ಲಾ ವಾಹನ ಸಂಚಾರಕ್ಕೆ ಅನುಮತಿ ಸಿಕ್ಕಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರ ವರದಿ ಮೆರೆಗೆ ಎಲ್ಲಾ ರೀತಿ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಕಳೆದ ಒಂದು ವಾರ ಹಿಂದೆ ಭಾರಿ ಮಳೆಯಿಂದಾಗಿ ರಸ್ತೆ ಕುಸಿತವಾಗಿತ್ತು. ಹೀಗಾಗಿ ಬಸ್ ಮತ್ತು ಲಾರಿ ಸಂಚಾರಕ್ಕೆ ಜಿಲ್ಲಾಧಿಕಾರಿ ಬ್ರೇಕ್ ಹಾಕಿದ್ದರು. ಇದೀಗ ಎಲ್ಲ ವಾಹನ ಸಂಚಾರಕ್ಕೂ ಅನುಮತಿ ನೀಡಲಾಗಿದೆ ಎಂದು ತಹಸೀಲ್ದಾರ್ ಜಯಕುಮಾರ್ ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು