Recent Posts

Saturday, September 12, 2026
ಸುದ್ದಿ

ಕಬಡ್ಡಿ ಸ್ಫರ್ಧೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ- ಕಹಳೆ ನ್ಯೂಸ್

ಪುತ್ತೂರು : ಕಲ್ಲಡ್ಕದ ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಕಬಡ್ಡಿ ಸ್ಫರ್ಧೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯ್ಲ ಮಟ್ಟಕ್ಕೆ ಆಯ್ಕೆ ಆಗಿದೆ.

ಜಾಹೀರಾತು

ತಂಡದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಭವಿಷ್ಯ ಕೆ, ಪವಿತ್ರ ಭಟ್ ಕೆ, ವಾಣಿಜ್ಯ ವಿಭಾಗದ ಖುಷಿ ರೈ, ಸೌಮ್ಯ ರೈ, ನಿತ್ಯಶ್ರೀ ರೈ, ಸಂಚನಾ, ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಅನ್ನಪೂರ್ಣ ರೈ, , ವಾಣಿಜ್ಯ ವಿಭಾಗದ ಹೇಮಲತಾ ಕೆ, ಮನ್ಯಾ ಶ್ರೀ ಎಂ, ಕಲಾ ವಿಭಾಗದ ಭೂಮಿಕಾ ಭಾಗವಹಿಸಿದ್ದರು.
ಈ ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು