Recent Posts

Saturday, September 12, 2026
ಸುದ್ದಿ

ಉಡುಪಿ ಜಿಲ್ಲೆಯ ರಜತ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಿದ ರಾಜ್ಯಪಾಲ ಗೆಹ್ಲೋಟ್ – ಕಹಳೆ ನ್ಯೂಸ್

ಮಂಗಳೂರು : ಉಡುಪಿ ಜಿಲ್ಲೆಯ ರಜತ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಮಂಗಳೂರಿಗೆ ಆಗಮಿಸಿದರು.

ಜಾಹೀರಾತು

ಬೆಂಗಳೂರಿನಿಂದ ವಿಮಾನ ಮೂಲಕ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಜತೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ರಾಜ್ಯಪಾಲರನ್ನು ಇಂಧನ, ಕನ್ನಡ ಮತ್ತು ಸಂಸ್ಕೃತಿ ಖಾತೆಯ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ। ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಅವರು ಸ್ವಾಗತಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರು ಪೋಲಿಸ್ ಆಯುಕ್ತ ಎನ್‌. ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಉಪಸ್ಥಿತರಿದ್ದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬಳಿಕ ರಸ್ತೆ ಮಾರ್ಗವಾಗಿ ಉಡುಪಿಗೆ ತೆರಳಿದರು.