Recent Posts

Sunday, September 13, 2026
ಸುದ್ದಿ

ಉಡುಪಿ: ಬಸ್ ಢಿಕ್ಕಿ ಆಗಿ ಮೀನಿನ ಲಾರಿ ಪಲ್ಟಿ-ಪರಾರಿಯಾಗಲು ಯತ್ನಿಸಿದ ಬಸ್ಸಿಗೆ ಟೋಲ್‌ನಲ್ಲಿ ತಡೆ –ಕಹಳೆ ನ್ಯೂಸ್

ಉಡುಪಿ : ಮೀನಿನ ವಾಹನಕ್ಕೆ ಟೂರಿಸ್ಟ್ ಬಸ್‌ವೊಂದು ಢಿಕ್ಕಿಯಾದ ಪರಿಣಾಮ ವಾಹನ ಪಲ್ಟಿಯಾಗಿ ಅದೃಷ್ಟವಶಾತ್ ವಾಹನದಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾದ ಘಟನೆ ಉಡುಪಿಯ ಮೂಳೂರಿನಲ್ಲಿ ನಡೆದಿದೆ.

ಜಾಹೀರಾತು

ಭಟ್ಕಳದಿಂದ ಕೇರಳಕ್ಕೆ ಮೀನು ಸಾಗಾಟ ಮಾಡುತ್ತಿದ್ದ ಗೂಡ್ಸ್ ಟೆಂಪೊಗೆ ಹಿಂದಿನಿಂದ ಬರುತ್ತಿದ್ದ ಬಸ್ಸು ಡಿಕ್ಕಿಯಾದ ರಭಸಕ್ಕೆ ನಿಯಂತ್ರಣ ಕಳೆದುಕೊಂಡ ಗೂಡ್ಸ್ ವಾಹನ ರಸ್ತೆ ವಿಭಜಕ ಏರಿ ಮತ್ತೊಂದು ಪಾಶ್ವಕ್ಕೆ ಹೋಗಿ ಪಲ್ಟಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ತಕ್ಷಣ ಸ್ಥಳಕ್ಕೆ ಬಂದ ಪಡುಬಿದ್ರಿ ಪೊಲೀಸರು ಹೆಜಮಾಡಿ ಟೋಲ್ ಪ್ಲಾಜಾಕ್ಕೆ ಕರೆ ಮಾಡಿ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಟೋಲ್ ನಲ್ಲಿ ಬಸ್ ತಡೆಯಲಾಯಿತು.

ರಸ್ತೆಯಲ್ಲೇ ಪಲ್ಟಿಯಾದ ವಾಹನ ಇದ್ದ ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಸ್ಥಳಕ್ಕೆ ಆಗಮಿಸಿದ ಕಾಪು ಹಾಗೂ ಪಡುಬಿದ್ರಿ ಪೊಲೀಸರು ವಾಹನ ಸಂಚಾರ ಸುಗಮಗೊಳಿಸಿದ್ದಾರೆ