Recent Posts

Thursday, June 18, 2026
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿಸುಳ್ಯ

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ; ಪುತ್ತೂರು, ಸುಳ್ಯ ತಾಲೂಕಿನ 32 ಕಡೆ ಏಕಕಾಲಕ್ಕೆ ಎನ್​ಐಎ ದಾಳಿ, ಕೆಲವು ಶಂಕಿತ ಜಿಹಾದಿಗಳನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ..! – ಕಹಳೆ ನ್ಯೂಸ್

ಪುತ್ತೂರು, ಸೆ 06 : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಮತ್ತಷ್ಟು ಚುರುಕುಗೊಳಿಸಿದ್ದಾರೆ.

ಜಾಹೀರಾತು
ಜಾಹೀರಾತು

ಎನ್​ಐಎ ಅಧಿಕಾರಿಗಳ ತಂಡ ಸೆ.6ರಂದು ಬೆಳ್ಳಂಬೆಳಗ್ಗೆ ಪುತ್ತೂರು, ಸುಳ್ಯ ತಾಲೂಕಿನ ವಿವಿಧ ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ.ಮನೆ, ಕೆಲ ಖಾಸಗಿ ಕಟ್ಟಡಗಳು ಸೇರಿದಂತೆ ಒಟ್ಟು 32 ಕಡೆಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಆರೋಪಿಗಳು ಮತ್ತು ಆರೋಪಿಗಳಿಗೆ ಸಹಕರಿಸಿದವರ ವಿಚಾರಣೆ ನಡೆಯುತ್ತಿದ್ದು, ಎನ್​ಐಎ ಅಧಿಕಾರಿಗಳ ತಂಡಕ್ಕೆ ರಾಜ್ಯ ಪೊಲೀಸರು ಸಹಕಾರ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಜುಲೈ 26ರಂದು ಬಿಜೆಪಿ ಕಾರ್ಯಕರ್ತರ ಪ್ರವೀಣ್ ನೆಟ್ಟಾರು ಅವರನ್ನು ಮಾರಕಾಸ್ತ್ರದಿಂದ ದಾಳಿ ನಡೆಸಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು