Recent Posts

Thursday, June 18, 2026
ಸುದ್ದಿ

ಸೆ. 7ರಂದು ಶಕ್ತಿ ಪದವಿ ಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ತಾಲೂಕು ಮಟ್ಟದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟ – ಕಹಳೆ ನ್ಯೂಸ್

ಪದವಿ ಪೂರ್ವ ಶಿಕ್ಷಣ ಇಲಾಖೆ ದ.ಕ ಹಾಗೂ ಶಕ್ತಿ ಪದವಿ ಪೂರ್ವ ಕಾಲೇಜು ಶಕ್ತಿನಗರ ಮಂಗಳೂರು ಇದರ ಜಂಟಿಯಾಶ್ರಯದಲ್ಲಿ ಮಂಗಳೂರು ತಾಲೂಕು ಮಟ್ಟದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟ 2022 ಸೆ. 7ರಂದು ಶಕ್ತಿ ಪದವಿ ಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ರಾಜ್ಯ ಕಾರ್ಯಕಾರಿಣಿ ಸದಸ್ಯರು ಹಾಗೂ ಕ್ರೀಡಾ ಭಾರತಿ ಕರ್ನಾಟಕ ಹಾಗೂ ರಾಜ್ಯ ಮಟ್ಟದ ಕಬಡ್ಡಿ ಆಟಗಾರ ಭೋಜರಾಜ್ ಕಲ್ಲಡ್ಕ ಉದ್ಘಾಟಿಸಲಿದ್ದಾರೆ. ಕಾರ್ಯಕ್ರದಲ್ಲಿ ಜಿಲ್ಲಾ ಕ್ರೀಡಾ ಸಂಯೋಜಕ ಅರುಣ್ ಡಿಸೋಜಾ, ದ.ಕ ಪದವಿ ಪೂರ್ವ ಕಾಲೇಜುಗಳ ದೈಹಿಕ ಶಿಕ್ಷಣ ಉಪಾನ್ಯಾಸರ ಸಂಘದ ಅಧ್ಯಕ್ಷ ಸುಧಾಕರ್ ಶೆಟ್ಟಿ, ಕ್ರೀಡಾ ಸಂಯೋಜಕ ಶಶಿಧರ್ ಮಾಣಿ, ಉಪಸ್ಥಿತರಿರಲಿದ್ದಾರೆ. ಇನ್ನು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಕ್ತಿ ಎಜುಕೇಶನ್ ಟ್ರಸ್ಟ್ನ ಆಡಳಿತಾಧಿಕಾರಿ ಡಾ. ಕೆಸಿ ನಾÊಕ್ ವಹಿಸಲಿದ್ದಾರೆ.

ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು