Sunday, June 14, 2026
ಬೆಂಗಳೂರುರಾಜಕೀಯರಾಜ್ಯಶಿಕ್ಷಣಸುದ್ದಿ

ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ಈ ವರ್ಷದಿಂದಲೇ ಭಗವದ್ಗೀತೆ ಬೋಧನೆ ; ವಿಧಾನ ಪರಿಷತ್​ನಲ್ಲಿ ಸಚಿವ ಬಿಸಿ ನಾಗೇಶ್ – ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಭಗವದ್ಗೀತೆ (Bhagavad Gita) ಬೋಧನೆ ಆರಂಭಿಸುವ ಚಿಂತನೆ ನಡೆದಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ (BC Nagesh) ತಿಳಿಸಿದರು.

ಜಾಹೀರಾತು

ವಿಧಾನ ಪರಿಷತ್​ನಲ್ಲಿ ಈ ವಿಚಾರವನ್ನು ಸದಸ್ಯ ಎಂ.ಕೆ.ಪ್ರಾಣೇಶ್ (MK Pranesh) ಪ್ರಸ್ತಾಪಿಸಿದರು. ಭಗವದ್ಗೀತೆ ಬೋಧನೆ ಪ್ರಸ್ತಾಪ ಇಲ್ಲ ಎಂದು ಸರ್ಕಾರ ಹೇಳುತ್ತಿದೆ. ಈ ಹಿಂದೆ ಭಗವದ್ಗೀತೆ ಬೋಧನೆಗೆ ಸಮಿತಿ ರಚಿಸುವ ಬಗ್ಗೆ ಹೇಳಲಾಗಿತ್ತು. ಆದರೆ ಈಗ ಬೇರೆಯೇ ಹೇಳಿಕೆ ಹೊರಬಂದಿದೆ. ಭಗವದ್ಗೀತೆ ಬೋಧಿಸಲು ಸರ್ಕಾರಕ್ಕೆ ಮುಜುಗರವೇನಾದರೂ ಇದೆಯೇ? ಮೊದಲು ಇದ್ದ ಆಸಕ್ತಿ ಈಗ ಯಾಕೆ ಇಲ್ಲ ಎಂದು ಕೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಉತ್ತರಿಸಿ, ಈ ವರ್ಷದಿಂದಲೇ ನೈತಿಕ ಶಿಕ್ಷಣ ವಿಭಾಗದಲ್ಲಿ ಭಗವದ್ಗೀತೆ ಬೋಧಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಸಮಿತಿ ರಚನೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಹೇಳಿದರು.