ಉಡುಪಿ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಹೆಜಮಾಡಿಯಲ್ಲಿ ನಡೆದಿದೆ.
ಹೆಜಮಾಡಿ ಟೋಲ್ ಬಳಿಯ ಚಿತ್ರಕೂಟ ಮನೆಯ ಸದಾಶಿವ ಗಡಿಯಾರ್ ಎಂಬವರ ಪತ್ನಿ, ತೋಕೂರು ತಪೋವನ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಜಯಂತಿ ಸದಾಶಿವ ಗಡಿಯಾರ್ (54) ಆತ್ಮಹತ್ಯೆ ಮಾಡಿಕೊಂಡವರು.
ಮಾನಸಿಕ ಖಿನ್ನತೆಗೊಳಗಾಗಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದು, 25 ದಿನಗಳ ಹಿಂದೆ ಬೆಂಗಳೂರಿನಲ್ಲಿರುವ ತನ್ನ ಮಗಳ ಮನೆಗೆ ತೆರಳಿ ವಿಶ್ರಾಂತಿ ಪಡೆದಿದ್ದರು.
ಸೋಮವಾರ ಗಂಡನ ಜತೆಗೆ ಹೆಜಮಾಡಿಗೆ ಆಗಮಿಸಿದ್ದ ಅವರು ರಾತ್ರಿಯಿಂದ ನಾಪತ್ತೆಯಾಗಿದ್ದರು.
ಈ ಸಂದರ್ಭ ಮನೆಯ ಬಾವಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ ಎಂದು ಪಡುಬಿದ್ರೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ.