Tuesday, March 10, 2026
ದಕ್ಷಿಣ ಕನ್ನಡರಾಜ್ಯಸಂತಾಪಸುದ್ದಿ

ಖ್ಯಾತ ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ ರಾವ್ ಇನ್ನಿಲ್ಲ – ಕಹಳೆ ನ್ಯೂಸ್

ಮಂಗಳೂರು, ನ 30 : ಖ್ಯಾತ ಯಕ್ಷಗಾನ ಮತ್ತು ತಾಳೆ-ಮದ್ದಳೆ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ ರಾವ್ (88) ಅವರು ಅ. 30 ರ ಬುಧವಾರ ನಿಧನರಾಗಿದ್ದಾರೆ.ಕಾಯರ್ಕಾಡಿ ಕುಂಞಕಣ್ಣ ಮತ್ತು ಕಲ್ಯಾಣಿ ದಂಪತಿ ಸುಪುತ್ರರಾಗಿ 1934ನೇ ಮಾರ್ಚ್ 20ರಲ್ಲಿ ಕೇರಳ ರಾಜ್ಯದ ಕುಂಬಳೆಯಲ್ಲಿ ಜನಿಸಿದ್ದ ಇವರು, ಯಕ್ಷಗಾನದ ತೆಂಕತಿಟ್ಟು ಶೈಲಿಯ ಕಲಾವಿದರಾಗಿದ್ದ ಇವರು ಸುರತ್ಕಲ್, ಧರ್ಮಸ್ಥಳ ಮತ್ತು ಇರಾ ಯಕ್ಷಗಾನ ಮೇಳಗಳಲ್ಲಿ ಕಲಾವಿದರಾಗಿ ಕೆಲಸ ಮಾಡಿದ್ದರು.ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿ ಹಾಗೂ 1994 ರಿಂದ 1999ರವರೆಗೆ ಬಿಜೆಪಿಯಿಂದ ಸುರತ್ಕಲ್ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದಾರೆ .ಯಕ್ಷಗಾನ ಕಲಾವಿದರೊಬ್ಬರು ನೇರವಾಗಿ ಮತದಾರರಿಂದಲೇ ಆರಿಸಲ್ಪಟ್ಟ ಪ್ರಪ್ರಥಮ ಶಾಸಕರೆಂಬ ಹೆಗ್ಗಳಿಕೆ ಇವರ ಪಾಲಿಗೆ ಸಂದಿತ್ತು.ಸುಂದರ್ ರಾವ್ ಅವರು ಪತ್ನಿ ಇಬ್ಬರು ಪುತ್ರರು, ಮೂವರು ಪುತ್ರಿಯರನ್ನು ಅಗಲಿದ್ದಾರೆ. ನಾಳೆ ಅಂತ್ಯ ಸಂಸ್ಕಾರ ನೆರವೇರಲಿದ್ದು, ಸಾರ್ವಜನಿಕರಿಗೆ ವೀಕ್ಷಣೆಗೆ ಮಂಗಳೂರು ಪಂಪ್ವೆಲ್ ಬಳಿ ಇರುವ ಅವರ ಮನೆಯಲ್ಲಿ ಅವಕಾಶವಿದೆ. ಯಕ್ಷಗಾನ ಕಲಾರಂಗದ ಇಡೀ ತಂಡ ಅವರ ಅಗಲಿಕೆಗೆ ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು