Thursday, March 12, 2026
ಸುದ್ದಿ

ರಾಜ್ಯದ ಜನತೆಗೆ ಗುಡ್ ನ್ಯೂಸ್: ಸಂಪೂರ್ಣ ಉಚಿತ ಆರೋಗ್ಯ ಸೇವೆ ನೀಡುವ ‘ನಮ್ಮ ಕ್ಲಿನಿಕ್’ ನಾಳೆ ಲೋಕಾರ್ಪಣೆ – ಕಹಳೆ ನ್ಯೂಸ್

ರಾಜ್ಯದ ಬಡ ಜನತೆಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಸಂಪೂರ್ಣ ಉಚಿತ ಆರೋಗ್ಯ ಸೇವೆ ನೀಡುವ ‘ನಮ್ಮ ಕ್ಲಿನಿಕ್’ ರಾಜ್ಯದಾದ್ಯಂತ ಲೋಕಾರ್ಪಣೆಗೊಳ್ಳಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಳಗ್ಗೆ 11 ಗಂಟೆಗೆ ಇದರ ಉದ್ಘಾಟನೆ ನೆರವೇರಿಸಲಿದ್ದಾರೆ.

ರಾಜ್ಯದಲ್ಲಿ 2023ರ ಜನವರಿ ಅಂತ್ಯದ ವೇಳೆಗೆ ಒಟ್ಟು 438 ನಮ್ಮ ಕ್ಲಿನಿಕ್ ಆರಂಭಗೊಳ್ಳಲಿದ್ದು, ಮೊದಲ ಹಂತದಲ್ಲಿ ಅಂದರೆ ಡಿಸೆಂಬರ್ 14ರ ನಾಳೆಯಿಂದ 114 ‘ನಮ್ಮ ಕ್ಲಿನಿಕ್’ ಗಳು ಕಾರ್ಯ ನಿರ್ವಹಿಸಲಿವೆ. ಸೋಮವಾರದಂದು ನಡೆದ ಮಾಧ್ಯಮಗೋಷ್ಠಿಯಲ್ಲಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಈ ವಿಷಯ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ರಾಜ್ಯದಲ್ಲಿ ಆರಂಭವಾಗಲಿರುವ ಒಟ್ಟು 438 ನಮ್ಮ ಕ್ಲಿನಿಕ್ ಗಳ ಪೈಕಿ, ಬಾಗಲಕೋಟೆ 18, ಬಳ್ಳಾರಿ 11, ಬೆಳಗಾವಿ 21, ವಿಜಯನಗರ 6, ಬೆಂಗಳೂರು ಗ್ರಾಮಾಂತರ 9, ಬೀದರ್ 6, ಚಾಮರಾಜನಗರ 3, ಚಿಕ್ಕಬಳ್ಳಾಪುರ 3, ಚಿಕ್ಕಮಗಳೂರು 4, ಚಿತ್ರದುರ್ಗ 1, ದಕ್ಷಿಣ ಕನ್ನಡ 12, ಧಾರವಾಡ 6, ಗದಗ 11, ಹಾಸನ 5, ಹಾವೇರಿ 5, ಕಲಬುರಗಿ 11, ಕೊಡಗು 1, ಕೋಲಾರ 3, ಕೊಪ್ಪಳ 3, ಮಂಡ್ಯ 4, ಮೈಸೂರು 6, ರಾಯಚೂರು 8, ರಾಮನಗರ 3, ತುಮಕೂರು 10, ಉಡುಪಿ 10, ಉತ್ತರ ಕನ್ನಡ 10, ವಿಜಯಪುರ 10, ಯಾದಗಿರಿ 3 ಹಾಗೂ ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ 243 ಕ್ಲಿನಿಕ್ ಗಳು ಕಾರ್ಯ ನಿರ್ವಹಿಸಲಿವೆ.

ಜಾಹೀರಾತು
ಜಾಹೀರಾತು