ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಹಿರಿಯ ವಿಭಾಗದ ಸಂಸ್ಕೃತ ಕಂಠಪಾಠ ಸ್ಪರ್ಧೆಯಲ್ಲಿ ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ರಮ್ಯ ಭಟ್ ಗೆ ಪ್ರಥಮ ಸ್ಥಾನ – ಕಹಳೆ ನ್ಯೂಸ್

ಸುಳ್ಯ, ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ.ಕ.ಜಿ.ಪಂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರ ಕಛೇರಿ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಸುಳ್ಯ, ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ ಇದರ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಹಿರಿಯ ವಿಭಾಗದ ಸಂಸ್ಕೃತ ಕಂಠಪಾಠ ಸ್ಪರ್ಧೆಯಲ್ಲಿ ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ರಮ್ಯ ಭಟ್ ಪ್ರಥಮ ಸ್ಥಾನ ಪಡೆದಿದ್ದಾರೆ.















