
ಬೆಳ್ತಂಗಡಿ ಸಮೀಪದ ಲಾಯಿಲ ಕೊಯ್ಯುರು ಕ್ರಾಸ್ ತಿರುವಿನಲ್ಲಿ ಬೈಕ್ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ಸ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಒರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಉಜಿರೆಯ ಖಾಸಗಿ ಕಂಪೆನಿಯಲ್ಲಿ ಕೆಲಸ ಮುಗಿಸಿ ತನ್ನ ಪಲ್ಸರ್ ಬೈಕ್ ನಲ್ಲಿ ಬೆಳ್ತಂಗಡಿ ಕಡೆ ಬರುತ್ತಿದ್ದ ವಿಜಯ್ ಮತ್ತು ಶೈಲು ಅವರಿಗೆ ಬೆಳ್ತಂಗಡಿಯಿಂದ ಧರ್ಮಸ್ಥಳ ಕಡೆ ಸಂಚರಿಸುತ್ತಿದ್ದ ಬಸ್ ಡಿಕ್ಕಿ ಹೊಡೆದಿದೆ. ಬೈಕ್ ನಲ್ಲಿದ್ದ ವಿಜಯ್ ಸಾವನ್ನಪ್ಪಿದ್ದು ಶೈಲು ಅವರಿಗೆ ಗಂಭೀರ ಗಾಯಗಳಾಗಿದೆ.ಘಟನಾ ಸ್ಥಳಕ್ಕೆ ಪೋಲೀಸರು ಆಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ.














