Monday, March 9, 2026
ಸುದ್ದಿ

ಇಂದು ಧರ್ಮಸ್ಥಳ ನಾಳೆ ಸುಬ್ರಹ್ಮಣ್ಯ ದೇವಾಲಯಗಳಲ್ಲಿ ಸಂಕಷ್ಟ ನೀವಾರಣೆಗೆ ಸಿ.ಎಂ. ಕುಮಾರಸ್ವಾಮಿ ಮತ್ತು ಕುಟುಂಬದಿಂದ ವಿಶೇಷ ಪೂಜೆ – ಕಹಳೆ ನ್ಯೂಸ್

ಧರ್ಮಸ್ಥಳ, ಅ 13: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ದೇವಾಲಯದಲ್ಲಿ ಮಂಜುನಾಥ ದೇವರ ದರ್ಶನ ಪಡೆದು, ವಿಶೇಷ ಪ್ರಾರ್ಥನೆ ಸಲ್ಲಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಮಧ್ಯಾಹ್ನ ಒಂದು ಗಂಟೆಗೆ ಸಿಎಂ ಎಚ್.ಡಿ. ಕುಮಾರಸ್ವಾಮಿ ರಸ್ತೆ ಮಾರ್ಗದ ಮೂಲಕ ಹಾಸನದಿಂದ ಹೊರಟು ಸಂಜೆ ಐದು ಗಂಟೆಗೆ ಧರ್ಮಸ್ಥಳ ತಲುಪಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಧರ್ಮಸ್ಥಳದಲ್ಲಿ ದೇವರ ದರ್ಶನದ ಬಳಿಕ ಅಲ್ಲಿಂದ ರಸ್ತೆ ಮಾರ್ಗದ ಮೂಲಕವೇ ಸುಬ್ರಹ್ಮಣ್ಯಕ್ಕೆ ತೆರಳಲಿದ್ದಾರೆ. ಇಂದು ರಾತ್ರಿ ಸುಬ್ರಹ್ಮಣ್ಯದಲ್ಲಿ ಸಿಎಂ ತಂಗಲಿದ್ದಾರೆ. ಅಗಸ್ಟ್ 14ರ ಮಂಗಳವಾರ ಬೆಳಿಗ್ಗೆ ಸುಬ್ರಹ್ಮಣ್ಯದಲ್ಲಿ ದೇವರ ದರ್ಶನದ ಬಳಿಕ ರಸ್ತೆ ಮೂಲಕ ಬೆಂಗಳೂರಿಗೆ ಮರಳಿ ಪ್ರಯಾಣ ಬೆಳೆಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.