Monday, June 22, 2026
ಸುದ್ದಿ

ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ಮೋದಿಯವರಿಂದ ಹೊಸ ವರ್ಷದ ಶುಭಾಶಯ – ಕಹಳೆ ನ್ಯೂಸ್

ದೇಶದಾದ್ಯಂತ ಹೊಸ ವರ್ಷದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಗಣ್ಯರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.

ಜಾಹೀರಾತು

ಟ್ವೀಟ್ ಮಾಡಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ‘2023ರ ವರ್ಷವು ನಮ್ಮ ಜೀವನದಲ್ಲಿ ಹೊಸ ಸ್ಫೂರ್ತಿ, ಗುರಿ ಮತ್ತು ಸಾಧನೆಯನ್ನು ತರಲಿ. ರಾಷ್ಟ್ರದ ಏಕತೆ, ಸಮಗ್ರತೆ ಮತ್ತು ಅಂತರ್ಗತ ಅಭಿವೃದ್ಧಿಗೆ ನಮ್ಮನ್ನು ನಾವು ಸಮರ್ಪಿಸಿಕೊಳ್ಳಲು ಸಂಕಲ್ಪ ಮಾಡೋಣ’ ಎಂದು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಧಾನಿ ಮೋದಿಯವರು ಟ್ವೀಟ್ ಮಾಡಿ ‘2023ರ ವರ್ಷ ನಿಮ್ಮ ಪಾಲಿಗೆ ಭರವಸೆ, ಸಂತೋಷ ಮತ್ತು ಬಹಳಷ್ಟು ಯಶಸ್ಸಿನಿಂದ ಕೂಡಿರಲಿ. ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಸಿಗುವಂತಾಗಲಿ ಎಂದು ಆಶಿಸುತ್ತೇನೆ’ಎಂದು ಟ್ವೀಟ್ ಮಾಡಿದ್ದಾರೆ