Wednesday, March 18, 2026
ದಕ್ಷಿಣ ಕನ್ನಡರಾಜ್ಯಸುದ್ದಿ

ಕದ್ರಿ ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ : ಬ್ಯಾನರ್‌ ಅಳವಡಿಕೆಗೆ ಸಮ್ಮತಿ ಸೂಚಿಸದ ಆಡಳಿತ ಮಂಡಳಿ – ವಿಹಿಂಪ-ಬಜರಂಗದಳ ಅಳವಡಿಸಿದ್ದ ಬ್ಯಾನರ್‌ ತೆರವು – ಕಹಳೆ ನ್ಯೂಸ್

ಮಂಗಳೂರು: ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳು ವ್ಯಾಪಾರ ಮಾಡುವುದಕ್ಕೆ ಅವಕಾಶವಿಲ್ಲ ಎಂದು ವಿಹಿಂಪ-ಬಜರಂಗದಳ ವತಿಯಿಂದ ಅಳವಡಿಸಿದ ಬ್ಯಾನರನ್ನು ಪೊಲೀಸರು ಗುರುವಾರ ತೆರವುಗೊಳಿಸಿದ್ದಾರೆ.

ಜ.15ರಿಂದ 21ರ ವರೆಗೆ ಜಾತ್ರೆ ನಡೆಯಲಿದೆ. ಈ ನಡುವೆ ಗುರುವಾರ ಕ್ಷೇತ್ರದಲ್ಲಿ ಬ್ಯಾನರ್‌ ಕಂಡು ಬಂದಿದೆ. ಅದರಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟವನ್ನೂ ಉಲ್ಲೇಖ ಮಾಡಲಾಗಿದೆ. ಸ್ಫೋಟದ ಆರೋಪಿ ಮೊದಲು ಗುರಿ ಮಾಡಿದ್ದೇ ಕದ್ರಿ ಮಂಜುನಾಥ ದೇವಸ್ಥಾನವನ್ನು. ಅಂತಹ ಮನಸ್ಥಿತಿ ಉಳ್ಳವರಿಗೆ ಹಾಗೂ ವಿಗ್ರಹಾರಾಧನೆ ಹರಾಮ್‌ ಎಂದು ನಂಬಿರುವ ಯಾರಿಗೂ ಈ ಜಾತ್ರೆಯಲ್ಲಿ ವ್ಯಾಪಾರಕ್ಕೆ ಅವಕಾಶವಿಲ್ಲ. ಸನಾತನ ಧರ್ಮದ ಆಚರಣೆ ಹಾಗೂ ನಂಬಿಕೆಯಲ್ಲಿ ವಿಶ್ವಾಸವುಳ್ಳ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶ ಎಂದು ಬರೆಯಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ದೇವಸ್ಥಾನವಾಗಿರುವುದರಿಂದ ಆಡಳಿತ ಮಂಡಳಿ ಈ ಬ್ಯಾನರ್‌ ಅಳವಡಿಕೆಗೆ ಸಮ್ಮತಿ ಸೂಚಿಸಿಲ್ಲ. ಹೀಗಾಗಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ಬ್ಯಾನರ್‌ ತೆರವುಗೊಳಿಸಿದ್ದಾರೆ. ಈ ಕುರಿತಂತೆ ಯಾವುದೇ ದೂರು ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು