“ವಿಜಯ ಸಂಕಲ್ಪ ಅಭಿಯಾನ” : ಪುತ್ತುರು ಶಾಸಕರಿಂದ ಹಿರೆಬಂಡಾಡಿ ಗ್ರಾಮದ ಬೂತ್ 48 ರಲ್ಲಿ ಇಂದು ಮನೆ ಮನೆಗೆ ತೆರಳಿ ಅಭಿಯಾನಕ್ಕೆ ಚಾಲನೆ –ಕಹಳೆ ನ್ಯೂಸ್

ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರುರವರು ಅವರ ನೇತೃತ್ವದಲ್ಲಿ ಭಾರತೀಯ ಜನತಾ ಪಾರ್ಟಿ ಪುತ್ತೂರಿನ ವತಿಯಿಂದ “ವಿಜಯ ಸಂಕಲ್ಪ ಅಭಿಯಾನ” ಆರಂಭವಾಗಿದೆ.


ಹಿರೆಬಂಡಾಡಿ ಗ್ರಾಮದ ಬೂತ್ ೪೮ರಲ್ಲಿ ಇಂದು ಮನೆ ಮನೆಗೆ ತೆರಳಿ ರಾಜ್ಯ ಬಿಜೆಪಿ ಸರ್ಕಾರದ ಸಾಧನೆ ಮತ್ತು ಪುತ್ತೂರು ವಿಧಾನಸಭಾ ಕ್ಷೇತ್ರದ ಸಾಧನೆಯ ಪತ್ರವನ್ನು ಮತ್ತು ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಯಿತು.


ಈ ಸಂದರ್ಭದಲ್ಲಿ ಪುತ್ತೂರು ಗ್ರಾಮಾಂತರ ಮಂಡಲಾಧ್ಯಕ್ಷರಾದ ಶ್ರೀ ಸಾಜ ರಾಧಾಕೃಷ್ಣ ಆಳ್ವ, ಪ್ರಧಾನ ಕಾರ್ಯದರ್ಶಿ ಶ್ರೀ ಪುರುಷೋತ್ತಮ ಮುಂಗ್ಲಿಮನೆ, ಮಂಡಲ ಉಪಾಧ್ಯಕ್ಷರಾದ ಶ್ರೀ ಮುಕುಂದ ಬಜತ್ತೂರು, ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರುಗಳು, ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

















