Wednesday, March 18, 2026
ಸುದ್ದಿ

ಮಂಗಳೂರು: ಹೊಯಿಗೆ ಬಜಾರ್‌ ವಾರ್ಡಿನ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರಿಂದ ಚಾಲನೆ -ಕಹಳೆ ನ್ಯೂಸ್

ಮಂಗಳೂರು: ನಗರದ ಹೊಯಿಗೆ ಬಜಾರ್‌ ವಾರ್ಡಿನಲ್ಲಿ ರಸ್ತೆ ಕಾಂಕ್ರಿಟೀಕರಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಿ. ವೇದವ್ಯಾಸ ಕಾಮತ್‌ ಅವರು ಸ್ಥಳೀಯರ ಉಪಸ್ಥಿತಿಯಲ್ಲಿ ಗುದ್ದಲಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಬಿಜೆಪಿ ಸರಕಾರದ ಅವಧಿಯಲ್ಲಿ ಮಂಗಳೂರು ನಗರದ ಅಭಿವೃದ್ಧಿಗೆ ದಾಖಲೆಯ ಮೊತ್ತದ ಅನುದಾನ ಬಿಡುಗಡೆಯಾಗಿದ್ದು, ಪ್ರತಿದಿನ ಹೊಸ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ. ನಿರಂತರ ನೀರು ಪೂರೈಕೆ, ರಸ್ತೆ, ಚರಂಡಿಗಳ ಅಭಿವೃದ್ಧಿ ಸೇರಿದಂತೆ ಜನರ ಜೀವನಮಟ್ಟವನ್ನು ಸುಧಾರಿಸುವ ನಾನಾ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ನುಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಪೂರ್ಣಿಮಾ ಉಪಮೇಯರ್, ನಿತಿನ್ ಕುಮಾರ್, ಅನಿಲ್ ಕುಮಾರ್, ಯೋಗಿಶ್ ಕಾಂಚನ್, ವಿನೋದ್ ಮೆಂಡನ್, ನಿತೇಶ್ ರೈ, ಹೇಮಂತ್, ವಸಂತ್ ಜೆ ಪೂಜಾರಿ, ಪ್ರದೀಪ್ ಶೆಟ್ಟಿ, ಸುರೇಂದ್ರ ಸಾಲಿಯಾನ್, ವಾಸು, ಸೀತಾರಾಂ ಕೋಟ್ಯಾನ್ ಮುಂತಾದವರು ಪಾಲ್ಗೊಂಡಿದ್ದರು.

ಜಾಹೀರಾತು
ಜಾಹೀರಾತು